Site icon Kundapra.com ಕುಂದಾಪ್ರ ಡಾಟ್ ಕಾಂ

ಉಪ್ಪುಂದ ಗ್ರಾ.ಪಂ ಮಾಜಿ ಅಧ್ಯಕ್ಷೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಉಪ್ಪುಂದ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ದುರ್ಗಮ್ಮ ಖಾರ್ವಿ ಹಾಗೂ ಮಾಜಿ ಉಪಾಧ್ಯಕ್ಷೆ ಸಿಂಗಾರಿ ಶೆಡ್ತಿಯವರು ಕಾಂಗ್ರೇಸ್ ಪಕ್ಷದ ಕಾರ್ಯ ವೈಖರಿಗೆ ಬೇಸತ್ತು, ಭಾರತೀಯ ಜನತಾ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಪರ್ವವನ್ನು ಮೆಚ್ಚಿ ಭಾರತೀಯ ಜನತಾ ಪಕ್ಷದ ಬೈಂದೂರು ಕ್ಷೇತ್ರಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿಯವರ ಸಮ್ಮುಖದಲ್ಲಿ ಬಿಜೆಪಿಗೆ ಬೈಂದೂರು ಬಿಜೆಪಿ ಕಚೇರಿಯಲ್ಲಿ ಇಂದು ಸೇರ್ಪಡೆಗೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷ ಆನಂದ ಖಾರ್ವಿ ಉಪ್ಪುಂದ, ಜಿಲ್ಲಾ ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ಬೈಂದೂರು ಮಂಡಲ ಉಪಾಧ್ಯಕ್ಷ ಗಣೇಶ್ ಗಾಣಿಗ ಉಪ್ಪುಂದ, ಶಿರೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಜಗನ್ನಾಥ ಮೊಗವೀರ ಉಪ್ಪುಂದ, ಉಪ್ಪುಂದ ಶಕ್ತಿ ಕೇಂದ್ರದ ಅಧ್ಯಕ್ಷ ದಿವಾಕರ ಶೆಟ್ಟಿ ನೆಲ್ಯಾಡಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯ ಮೋಹನ ಚಂದ್ರ ಉಪ್ಪುಂದ ಹಾಗೂ ಮಾಜಿ ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version