ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಂಘ ಸಂಸ್ಥೆಗಳು ಊರಿನ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವುದು ಶ್ಲಾಘನಾರ್ಹವಾಗಿದ್ದು, ಇಂತಹ ಸಂಸ್ಥೆಗಳು ಇನ್ನಷ್ಟು ಬೆಳೆಯಲಿ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ಸುಧೀಚಂದ್ರ ಸೂಡ ಹೇಳಿದರು.
ಅವರು ಬುಧವಾರ ಶಿರೂರು ಸರಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಶಿರೂರು ಅಸೋಸಿಯೇಷನ್ ಅವರು ಸಾರ್ವಜನಿಕ ಸೇವೆಗಾಗಿ ಕೊಡುಗೆಯಾಗಿ ನೀಡಿದ ನೂತನ ಆಂಬ್ಯುಲೆನ್ಸ್ ಹಸ್ತಾಂತರಿಸಿ ಮಾತನಾಡಿ ಎಂ.ಎಂ. ಹೌಸ್‌ನವರು ಊರಿನ ಹಿತಕ್ಕಾಗಿ ಊದಾರ ದೇಣಿಗೆ ನೀಡುತ್ತಿರುವುದು ಶ್ಲಾಘನಾರ್ಹ ಎಂದರು.
ಶಿರೂರು ಅಸೋಸಿಯೇಷನ್ ಉಪಾಧ್ಯಕ್ಷ ಸಾದನ್‌ದಾಸ್ ಪ್ರಾಸ್ತಾವಿಕ ಮಾತುಗಳನ್ನಾಡಿ ಸಂಸ್ಥೆಯ ಮೂಲಕ ಹಲವಾರು ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ವಿದೇಶಗಳಲ್ಲಿ ನೆಲೆಸಿರುವ ಶಿರೂರಿಗರು ಊರಿನ ಅಭಿವೃದ್ಧಿಯ ದೃಷ್ಟಿಯಿಂದ ಒಂದುಗೂಡಿ ಆರಂಭಿಸಿದ ಶಿರೂರು ಅಸೋಸಿಯೇಷನ್ ಹಲವಾರು ಸೇವಾ ಕಾರ್ಯಗಳನ್ನು ಕೈಗೊಂಡು ಊರಿನ ಪ್ರಗತಿಯಲ್ಲಿ ಕೈಜೋಡಿಸಿದೆ. ಇಲ್ಲಿ ನಾವು ರಾಜಕಿಯ ರಹಿತವಾಗಿ ಶ್ರಮಿಸುತ್ತಿದ್ದು, ಊರಿನವರ ಸಹಕಾರವೂ ಅತಿಮುಖ್ಯ ಎಂದರು.
ಮುಖ್ಯ ಅತಿಥಿಗಳಾಗಿ ಶಿರೂರು ಎಂ.ಎಂ. ಹೌಸ್‌ನ ಮಣೆಗಾರ್ ಜಿಪ್ರಿ ಸಾಹೇಬ್, ಬಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರೇಮಾನಂದ, ಶಿರೂರು ಗ್ರಾ.ಪಂ ಅಭಿವೃದ್ದಿ ಅಧಿಕಾರಿ ಮಂಜುನಾಥ ಶೆಟ್ಟಿ, ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಸಹನಾ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆಯ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಲಾಯಿತು. ಪತ್ರಕರ್ತ ಅರುಣ ಕುಮಾರ್ ಶಿರೂರು ಕಾರ್ಯಕ್ರಮ ನಿರೂರಪಿಸಿ, ವಂದಿಸಿದರು.