ಕುಂದಾಪುರ: ಕಾಶೀ ಮಠಾಧೀಶ ಶ್ರೀ ಸುಧೀಂದ್ರ ತೀರ್ಥ ಸ್ವಾಮಿಜಿಯವರ ಪಟ್ಟದ ಶಿಷ್ಯ ಶ್ರೀ ಸಂಯಮೀಂದ್ರ ಸ್ವಾಮೀಜಿಯವರ ಚಾತುರ್ಮಾಸ ವ್ರತ ಸ್ವೀಕಾರ ಕಾರ್ಯಕ್ರಮ ಕೋಟೇಶ್ವರದ ಶ್ರೀ ಪಟ್ಟಾಬಿ ರಾಮಚಂದ್ರ ದೇವಸ್ಥಾನದಲ್ಲಿ ಸಂಭ್ರಮದಿಂದ ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ಜಿಎಸ್‌ಬಿ ಸಮಾಜಬಾಂಧವರಿಗೆ ಆಶೀರ್ವಚನ ನೀಡಿದರು. ಈ ಸಂದರ್ಭ ಊರ ಪರಊರ ದೇವಸ್ಥಾನಗಳ ಆಡಳಿತ ಮೊಕ್ತೇಸರರು ಹಾಗೂ ಗಣ್ಯರು ಸ್ವಾಮೀಜಿ ಅವರಿಗೆ ಹಾರಾರ್ಪಣೆ ಮಾಡಿದರು.
ಕೋಟೇಶ್ವರ ಶ್ರೀ ಪಟ್ಟಾಬಿ ರಾಮಚಂದ್ರ ದೇವಸ್ಥಾನದ ಆಡಳಿತ ಧರ್ಮದರ್ಶಿ ಶ್ರೀಧರ ವಿ. ಕಾಮತ್ ಸ್ವಾಗತಿಸಿದರು. ಚಾತುರ್ಮಾಸ ಸಮಿತಿ ಕೋಶಾಧಿಕಾರಿ ಕೆ. ದಿನೇಶ್ ಕಾಮತ್ ಕಾರ್ಯಕ್ರಮ ನಿರೂಪಿಸಿದರು.