Site icon Kundapra.com ಕುಂದಾಪ್ರ ಡಾಟ್ ಕಾಂ

ಗ್ರಾ.ಪಂ ಸಾರ್ವತ್ರಿಕ ಚುನಾವಣೆ: ಸಂತೆ, ಜಾತ್ರೆ ನಿಷೇಧ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಡಿ. 22 ಮತ್ತು ಡಿ. 27 ರಂದು ಚುನಾವಣೆ ನಡೆಯಲಿದ್ದು, ಮತದಾನದ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮತ್ತು ಸಾರ್ವಜನಿಕರು ಮತ ಹಾಕಲು ಅನುಕೂಲವಾಗುವಂತೆ ಜಿಲ್ಲೆಯ ಈ ಕೆಳಕಂಡ ತಾಲೂಕಿನ ಚುನಾವಣೆ ನಡೆಯಲಿರುವ ಗ್ರಾಮಪಂಚಾಯತ್‌ನ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮದ ಅಡಿಯಲ್ಲಿ ಚುನಾವಣೆ ನಡೆಯುವ ದಿನಗಳಂದು ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿರುತ್ತಾರೆ.

ಡಿ. 22 ರ ಮೊದಲ ಹಂತದ ಚುನಾವಣೆ ಸಂದರ್ಭದಲ್ಲಿ ಬೈಂದೂರು ತಾಲೂಕು ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಪ್ಪುಂದ ಗ್ರಾಮದ ವಾರದ ಸಂತೆ, ಬ್ರಹ್ಮಾವರ ತಾಲೂಕು ನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದ್ದೂರಿನಲ್ಲಿ ನಡೆಯುವ ಸಂತೆ, ಉಪ್ಪೂರು ಗ್ರಾಮ ಪಂಚಾಯತ್‌ನ ಕೊಳಲಗಿರಿ ಪ್ರದೇಶದಲ್ಲಿ ನಡೆಯುವ ಸಂತೆಯನ್ನು ನಿಷೇಧಿಸಲಾಗಿದೆ.

Exit mobile version