ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ವತ್ತಿನೆಣೆ ಗುಡ್ಡದಲ್ಲಿ ಬೆಂಕಿ ಅವಘಡದಿಂದಾಗಿ ಸುಮಾರು ಒಂದು ಎಕೆರೆ ಪ್ರದೇಶ ಬೆಂಕಿಗೆ ಆಹುತಿಯಾಗಿದೆ.
ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬಳ ಅವಾಂತರದಿಂದಾಗಿ ವತ್ತಿನೆಣೆ ಪ್ರದೇಶದ ಒಣ ಹುಲ್ಲು ಇರುವ ಜಾಗಕ್ಕೆ ಬೆಂಕಿ ತಗಲಿಸಿದ್ದಾಳೆ. ಶಿರೂರು, ಬೈಂದೂರು ಪರಿಸರದಲ್ಲಿ ಕಳೆದ ಹಲವು ದಿನಗಳಿಂದ ಕೆಲವು ಭಾಗಗಳಲ್ಲಿ ಬೆಂಕಿ ಹಚ್ಚುವ ಅಭ್ಯಾಸದಿಂದಾಗಿ ಅರಣ್ಯ ಇಲಾಖೆಗಳಿಗೆ ಸಮಸ್ಯೆಯಾಗಿ ಕಾಡುತ್ತಿದೆ.
ತಕ್ಷಣ ಅರಣ್ಯ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಿಂದಿಸುವಲ್ಲಿ ಯಶಸ್ವಿಯಾಗಿದ್ದು ಯಾವುದೇ ಮರ ಗಿಡಗಳಿಗೆ, ಅರಣ್ಯ ಪ್ರದೇಶಕ್ಕೆ ಹಾನಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.