Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು ವಿಧ್ಯಾರ್ಥಿಗಳಿಂದ ಕೈಗಾರಿಕಾ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವಿಭಾಗದ ಆಶ್ರಯದಲ್ಲಿ ಕೈಗಾರಿಕಾ ಭೇಟಿಯ ಭಾಗವಾಗಿ ಕೋಟದ ಜನತಾ ಫಿಶ್ ಮೀಲ್ ಮತ್ತು ಆಯಿಲ್ ಪ್ರಾಡಕ್ಟಸ್ ಇಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಕೈಗಾರಿಕಾ ಕೇಂದ್ರದ ಸಾರ್ವಜನಿಕ ಸಂಬಂಧ ಮತ್ತು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ ಅಧಿಕಾರಿಯಾದ ರವಿಕಿರಣ್ ಉತ್ಪನ್ನಗಳ ತಯಾರಿಕೆ ಮತ್ತು ಪ್ರಾತ್ಯಕ್ಷಿಕೆಯ ಕುರಿತು ಉಪನ್ಯಾಸ ನೀಡಿದರು. ಜೊತೆಗೆ ಯಂತ್ರಗಳ ಕಾರ್ಯವೈಖರಿಯನ್ನು ವಿವರಿಸಿದರು. ವಿದ್ಯಾರ್ಥಿಗಳಿಗೆ ಅವಕಾಶ ಮತ್ತು ಮಾರ್ಗದರ್ಶನ ನೀಡಿದ ಆಡಳಿತ ಮಂಡಳಿಗೆ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥೆ ಚೈತ್ರಾರವರು ವಂದಿಸಿದರು. ಕಾಲೇಜಿನ ವತಿಯಿಂದ ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿಯಾದ ದೀಕ್ಷಿತಾ ಯು. ಜಿ. ಸ್ಮರಣಿಕೆ ನೀಡಿ ಗೌರವಿಸಿದರು.

Exit mobile version