Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್‌ನ ಮಹಾಸಭೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ 2019-20ನೇ ಸಾಲಿನ ಮಹಾಸಭೆಯು ಇಲ್ಲಿನ ಶ್ರೀ ವೀರೇಶ ಮಾಂಗಲ್ಯ ಮಂದಿರದಲ್ಲಿ ಜರುಗಿತು

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಆನಂದ ಬಿಲ್ಲವ, ಅಮೃತ ಮಹೋತ್ಸವ ವರ್ಷದ ಸಂಭ್ರಮಾಚರಣೆಯಲ್ಲಿರುವ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಸದಸ್ಯರ ಸಹಕಾರದಿಂದ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. 2019-20ನೇ ಸಾಲಿನ ಅಂತ್ಯಕ್ಕೆ ಸಂಘವು 26.19 ಕೋಟಿ ರೂ. ಠೇವಣಿ ಹೊಂದಿದ್ದು, 12.89 ಕೋಟಿ ರೂ.ಗಳನ್ನು ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಹೂಡಿಕೆ ಮಾಡಲಾಗಿದೆ. ವರದಿ ವರ್ಷದಲ್ಲಿ ಸಂಘವು 96 ಕೋಟಿ ರೂ. ವ್ಯವಹಾರ ನಡೆಸಿದ್ದು, ವರ್ಷಾಂತ್ಯಕ್ಕೆ ಸಂಘವು 39.07 ಲಕ್ಷ ಲಾಭ ಗಳಿಸಿದೆ. ಸದಸ್ಯರಿಗೆ ಶೇ.15 ಪಾಲು ಮುನಾಫೆ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಸಂಘದ ನಿರ್ದೇಶಕರಾದ ಕೆ.ಮಾಧವ ಖಾರ್ವಿ, ಹರೀಶ ಮೇಸ್ತ, ಜಿ.ಗೋಪಾಲ ನಾಯ್ಕ್, ಶ್ರೀನಿವಾಸ ಜತ್ತನ್, ಚಂದ್ರಶೇಖರ ಪೂಜಾರಿ, ನಾಗರಾಜ ಪೂಜಾರಿ, ಯಮುನಾ, ಆಶಾಲತಾ, ನಾಗರಾಜ ಎಂ. ಮತ್ತು ಲಕ್ಷö್ಮಣ ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ವಾಸುದೇವ ಶೇರುಗಾರ್ ಸ್ವಾಗತಿಸಿದರು. ಪ್ರಧಾನ ವ್ಯವಸ್ಥಾಪಕ ದಯಾನಂದ ಗಾಣಿಗ ಆಡಳಿತ ಮಂಡಳಿ ವಾರ್ಷಿಕ ವಾಚಿಸಿ ಆಯವ್ಯಯ ಪಟ್ಟಿ ಮಂಡಿಸಿದರು. ನಿರ್ದೇಶಕ ಸುಭಾಶ್ಚಂದ್ರ ಪೂಜಾರಿ ವಂದಿಸಿದರು.

Exit mobile version