Site icon Kundapra.com ಕುಂದಾಪ್ರ ಡಾಟ್ ಕಾಂ

ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ಶೇ.40 ಮತ್ತು ಅದಕ್ಕಿಂತ ಹೆಚ್ಚಿನ ದೃಷ್ಟಿದೋಷವುಳ್ಳ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಡಿಸೆಂಬರ್ 31ರ ಒಳಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾಧಿಕಾರಿ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ: 0820-2574810/811 ನ್ನು ಸಂಪರ್ಕಿಸುವಂತೆ ಜಿಲ್ಲಾ ವಿಕಲಚೇತನರ ಸಬಲೀಕರಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version