ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ರಾಣಿ ಬಲೆ ಮೀನುಗಾರರ ಒಕ್ಕೂಟ ಉಪ್ಪುಂದ ಇದರ 2019-20 ನೇ ಸಾಲಿನ ವಾರ್ಷಿಕ ಮಹಾಸಭೆಯು ರಾಣಿಬಲೆ ಮೀ. ಮಾ. ಪ್ರಾ. ಸ.ಸಂಘ ಉಪ್ಪುಂದ ಇದರ ಆಡಳಿತ ಕಛೇರಿಯಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ವೆಂಕಟರಮಣ ಖಾರ್ವಿ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಸುರೇಶ್ ಖಾರ್ವಿ 2019-20 ನೇ ಸಾಲಿನ ಆಯ- ವ್ಯಯ ವನ್ನು ಮಂಡಿಸಿದರು, ಜೊತೆ ಕಾರ್ಯದರ್ಶಿ ಸೋಮಶೇಖರ್ ಖಾರ್ವಿ ಸಂಘದ ವಾರ್ಷಿಕ ವರದಿಯನ್ನು ವಾಚಿಸಿದರು.
ಇದೇ ಸಂದರ್ಭದಲ್ಲಿ ಭಾರತೀಯ ಭೂ ಸೇನೆಯಲ್ಲಿ 17 ವರ್ಷ ಸೇವೆ ಸಲ್ಲಿಸಿ ನಿವೃತ್ತರಾದ ಗಣಪತಿ ಖಾರ್ವಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷ ತಿಮ್ಮಪ್ಪ ಖಾರ್ವಿ, ಕೋಶಾಧಿಕಾರಿ ಆದ ಬಿ.ನಾಗೇಶ ಖಾರ್ವಿ, ಮತ್ತು ಸದಸ್ಯರಾದ ಎ.ಶ್ರೀನಿವಾಸ ಖಾರ್ವಿ, ಎಸ್.ಕೃಷ್ಣ ಖಾರ್ವಿ, ರಾಜೇಂದ್ರ ಖಾರ್ವಿ, ಶಂಕರ ಖಾರ್ವಿ, ನವೀನ ಖಾರ್ವಿ, ಶರತ್ ಖಾರ್ವಿ, ಉಪಸ್ಥಿತರಿದ್ದರು. ಹಾಗೂ ಸುಬ್ರಹ್ಮಣ್ಯ.ಎಂ. ನಿರೂಪಿಸಿ ವಂದಿಸಿದರು.

