Kundapra.com ಕುಂದಾಪ್ರ ಡಾಟ್ ಕಾಂ

ಜಿಲ್ಲಾ ಯುವ ಸಂಸತ್ತು: ಶ್ರೇಯಸ್ ಜಿ ಕೋಟ್ಯಾನ್, ಶೆರ್ಲಿನ್ ಡಿ ಆಲ್‌ಮೇಡಾ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಭಾರತ ಸರಕಾರದ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಯುವ ಸಂಸತ್ತು ವಿಭಾಗೀಯ ಮಟ್ಟದ ಭಾಷಣ ಸ್ಪರ್ಧೆಯು ಜಿಲ್ಲಾಧಿಕಾರಿಯವರ ಕಛೇರಿಯ, ವಿಡೀಯೊ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆಯಿತು.

ಉಡುಪಿ ಜಿಲ್ಲೆಯು ನೊಡೆಲ್ ಕೇಂದ್ರವಾಗಿದ್ದು, ಇದರ ಆಶ್ರಯದಲ್ಲಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಹಾಗೂ ಉಡುಪಿ ಜಿಲ್ಲೆಯ 18 ರಿಂದ 25 ವರ್ಷದೊಳಗಿನ 38 ಯುವ ಜನರು ಆನ್‌ಲೈನ್ ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಜಿಲ್ಲೆಯಿಂದ ಶ್ರೇಯಸ್ ಜಿ ಕೋಟ್ಯಾನ್ ಹಾಗೂ ಶೆರ್ಲಿನ್ ಡಿ ಆಲ್‌ಮೇಡಾ ವಿಜೇತರಾಗಿದ್ದು, ಜನವರಿ 5 ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಮಟ್ಟದ ಆನ್‌ಲೈನ್ ಭಾಷಣ ಸ್ಫರ್ದೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಸ್ಪರ್ಧೆಯ ತೀರ್ಪುಗಾರರಾಗಿ ಉಡುಪಿ ಎಂಜಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ವಿಜಯ್, ಕುಂದಾಪುರ ಭಂಡಾರ್‌ರ‍್ಸ್ ಕಲೆ ಮತ್ತು ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ. ನಾರಾಯಣ ಶೆಟ್ಟಿ, ಕೋಟೇಶ್ವರ ಸರಕಾರಿ ಪ್ರಥಮ ದರ್ಜೇ ಕಾಲೇಜಿನ ಪ್ರಾಂಶುಪಾಲ ಡಾ. ರಾಜೇಂದ್ರ ನಾಯಕ್, ಮೂಡುಬೆಳ್ಳೆ ಸೆಂಟ್ ಲಾರೆನ್ಸ್ ಪಿಯು ಕಾಲೇಜಿನ ಪ್ರಾಂಶುಪಾಲ ಡಾ. ಎಡ್ವರ್ಡ್ ಎಲ್ ಡಿ ಸೋಜಾ ಹಾಗೂ ತೆಂಕನಿಡಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೊ.ದಯಾನಂದ ಕುಮಾರ್ ಭಾಗವಹಿಸಿದ್ದರು.

Exit mobile version