Site icon Kundapra.com ಕುಂದಾಪ್ರ ಡಾಟ್ ಕಾಂ

ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ರೋಟರಿ ಕ್ಲಬ್ ಮತ್ತು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇವರ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಗಂಗೊಳ್ಳಿಯ ಸ.ವಿ.ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.

ಶಿಬಿರ ಉದ್ಘಾಟಿಸಿ ಮಾತನಾಡಿದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ನೇತ್ರತಜ್ಞ ಡಾ.ಕೀರ್ತನ್ ರಾವ್, ಕಣ್ಣಿನ ದೋಷ ಹಾಗೂ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಕಾಲ ಕಾಲಕ್ಕೆ ಕಣ್ಣಿನ ತಪಾಸಣೆ ಮಾಡಿಸಿಕೊಂಡು ಕಣ್ಣಿನ ಆರೈಕೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ನೇತ್ರತಜ್ಞರಾದ ಡಾ. ಅಲಿಷಾ, ಡಾ. ನಿಖಿಲ್, ಗಂಗೊಳ್ಳಿ ರೋಟರಿ ಕ್ಲಬ್ ಕಾರ್ಯದರ್ಶಿ ಎಂ. ನಾಗೇಂದ್ರ ಪೈ ಉಪಸ್ಥಿತರಿದ್ದರು.

ರೋಟರಿ ಅಧ್ಯಕ್ಷ ಬಿ.ಲಕ್ಷ್ಮೀಕಾಂತ ಮಡಿವಾಳ ಸ್ವಾಗತಿಸಿದರು. ನಾರಾಯಣ ಇ.ನಾಯ್ಕ್ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Exit mobile version