Kundapra.com ಕುಂದಾಪ್ರ ಡಾಟ್ ಕಾಂ

ಅಕಾಡೆಮಿ ಪ್ರಶಸ್ತಿ, ಫೆಲೋಶಿಪ್ ಮತ್ತು ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು, ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಅಂಗ ಸಂಸ್ಥೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ ಅಕಾಡೆಮಿಯ ವಿವಿಧ ಪ್ರಶಸ್ತಿ, ಫೆಲೋಶಿಪ್ ಮತ್ತು ಸದಸ್ಯತ್ವಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಮತ್ತು ಇತರೆ ವಿವರಗಳನ್ನು ಅಕಾಡೆಮಿಯ ವೆಬ್‌ಸೈಟ್ https://kstacademy.in/kn ನಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-29721550/ 29721549 ಅನ್ನು ಸಂಪರ್ಕಿಸುವಂತೆ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version