ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮೂಲಕ ಪ್ರಸಕ್ತ ಸಾಲಿಗೆ ಕಿರುಸಾಲ ಯೋಜನೆಯಡಿ ಸ್ತ್ರಿ ಶಕ್ತಿ ಸ್ವಸಹಾಯ ಗುಂಪುಗಳು ಆರ್ಥಿಕ ಚಟುವಟಿಕೆ ಕೈಗೊಳ್ಳಲು 3 ಲಕ್ಷ ರೂ. ಮೇಲ್ಪಟ್ಟು ಉಳಿತಾಯ ಇರುವ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಸ್ತ್ರಿ ಶಕ್ತಿ ಸ್ವಸಹಾಯ ಗುಂಪುಗಳಿಗೆ 3 ಲಕ್ಷ ಹಾಗೂ 2 ಲಕ್ಷ ರೂ. ಮೇಲ್ಪಟ್ಟು ಉಳಿತಾಯ ಇರುವ ಇತರೆ ಸ್ತ್ರಿ ಶಕ್ತಿ ಸ್ವ-ಸಹಾಯ ಗುಂಪುಗಳಿಗೆ 2 ಲಕ್ಷ ರೂ. ಬಡ್ಡಿ ರಹಿತ ಸಾಲ ನೀಡಲು, ಸ್ತ್ರಿ ಶಕ್ತಿ ಸ್ವ-ಸಹಾಯ ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 13 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574978 ನ್ನು ಸಂಪರ್ಕಿಸುವಂತೆ ಇಲಾಖೆಯ ಪ್ರಕಟಣೆ ತಿಳಿಸಿದೆ.