Kundapra.com ಕುಂದಾಪ್ರ ಡಾಟ್ ಕಾಂ

ಮುದ್ರಿಮಾರಿಕಾಂಬ ಕಂಚುಗೋಡು ತಂಡಕ್ಕೆ ‘ಫಿಶರ್‌ಮ್ಯಾನ್ ಟ್ರೋಫಿ’

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಜಿಕೆಡಿಎಚ್ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರಿಗಾಗಿ ಹಮ್ಮಿಕೊಂಡ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟ ‘ಫಿಶರ್‌ಮ್ಯಾನ್ ಟ್ರೋಫಿ -2021’ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಿತು.

ಉಡುಪಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶಪಾಲ ಸುವರ್ಣ ಅಧ್ಯಕ್ಷತೆಯಲ್ಲಿ ಕುಂದಾಪುರ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಾನಂದ ಪೂಜಾರಿ ಪಂದ್ಯಾಟ ಉದ್ಘಾಟಿಸಿದರು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ ಸಂಘದ ಅಧ್ಯಕ್ಷ ಎಚ್.ಮಂಜು ಬಿಲ್ಲವ, ಗಂಗೊಳ್ಳಿ ಹಸಿಮೀನು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ವಾಸುದೇವ ಖಾರ್ವಿ, ಗಂಗೊಳ್ಳಿ ಗ್ರಾಪಂ ಸದಸ್ಯ ನಾಗರಾಜ ಖಾರ್ವಿ, ಗಂಗೊಳ್ಳಿ ಜಿಕೆಡಿಎಚ್ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಹರೀಶ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

ನಡೆದ ಅಂತಿಮ ಹಣಾಹಣಿಯಲ್ಲಿ ಮುದ್ರಿಮಾರಿಕಾಂಬ ಕಂಚುಗೋಡು ತಂಡವು ಮಂಗಳಗೌರಿ ಕಂಚುಗೋಡು ತಂಡವನ್ನು ಸೋಲಿಸಿ ಫಿಶರ್‌ಮ್ಯಾನ್ ಟ್ರೋಫಿ-2021ನ್ನು ತನ್ನದಾಗಿಸಿಕೊಂಡಿತು. ಅರುಣ್ ಖಾರ್ವಿ ಸರಣಿ ಶ್ರೇಷ್ಠ ಹಾಗೂ ನಿರಂಜನ ಖಾರ್ವಿ ಉತ್ತಮ ಎಸೆತಗಾರ ಪ್ರಶಸ್ತಿ ಪಡೆದುಕೊಂಡರು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ವಹಿಸಿದ್ದರು. ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಮಂಜುನಾಥ ಜಿ.ಟಿ., ಹರೀಶ ಮೇಸ್ತ, ಎಚ್.ಮಂಜು ಬಿಲ್ಲವ, ಚೌಕಿ ವಿಠಲ ಖಾರ್ವಿ, ವಿಘ್ನೇಶ ಖಾರ್ವಿ, ಶಂಕರ ಖಾರ್ವಿ, ರಾಮಚಂದ್ರ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭ ಈಜುಪಟು ನಾಗರಾಜ ಖಾರ್ವಿ ಕಂಚುಗೋಡು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸುಂದರ ಜಿ. ಕಾರ್ಯಕ್ರಮ ನಿರೂಪಿಸಿದರು.

Exit mobile version