Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಅನ್ನಪ್ರಾಶನ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ, ಶಿಶು ಅಭಿವೃದ್ಧಿ ಯೋಜನೆ ಕುಂದಾಪುರ, ಗ್ರಾಮ ಪಂಚಾಯತ್ ಗಂಗೊಳ್ಳಿ ಮತ್ತು ಅಂಗನವಾಡಿ ಕೇಂದ್ರ ಮೇಲ್‌ಗಂಗೊಳ್ಳಿ ಇವರ ಆಶ್ರಯದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಅನ್ನಪ್ರಾಶನ ಕಾರ್ಯಕ್ರಮ ಇಲ್ಲಿನ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಕಾರ್ಯಕ್ರಮ ಉದ್ಘಾಟಿಸಿದರು. ಕುಂದಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ವೇತಾ ಮಾಹಿತಿ ನೀಡಿ ಮಾತನಾಡಿದರು.

ಅವಿನಾಶ್, ಪತ್ರಕರ್ತ ಬಿ.ರಾಘವೇಂದ್ರ ಪೈ, ಭಾರತೀಯ ವಿಕಾಸ ಟ್ರಸ್ಟ್‌ನ ಮುಖ್ಯ ವ್ಯವಸ್ಥಾಪಕ ಅರುಣ್ ಪಟವರ್ಧನ್ ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫೆರ್ನಾಂಡಿಸ್ ಸ್ವಾಗತಿಸಿದರು. ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Exit mobile version