Site icon Kundapra.com ಕುಂದಾಪ್ರ ಡಾಟ್ ಕಾಂ

ಪ್ರಾಡಕ್ಟ್ ಡೆವಲಪ್ಮೆಂಟ್ & ಪೇಟೆಟಿಂಗ್: ವೆಬಿನಾರ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ವತಿಯಿಂದ ಪ್ರಾಡಕ್ಟ್ ಡೆವಲಪ್ಮೆಂಟ್ & ಪೇಟೆಟಿಂಗ್ ವಿಷಯದ ಮೇಲೆ ವೆಬಿನಾರ್ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಅಮೇರಿಕಾದ ಕೂಪರ್ ಲೈಟಿಂಗ್ ಸೊಲ್ಯೂಷನ್ಸ್ ಕಂಪನಿಯ ಪ್ರವೀರ್ ಮಂಜಪ್ಪರವರು ಭಾಗವಹಿಸಿದ್ದರು.

ತಮ್ಮದೇ ಕಂಪನಿಯ ಉತ್ಪನ್ನಗಳ ಅಭಿವೃದ್ಧಿ ಮತ್ತು ವಿನ್ಯಾಸಗಳ ಮಾಹಿತಿ ನೀಡುತ್ತಾ ಇಂಜಿನಿಯರ್ ಗಳಿಗೆ ಪೆಟೆಂಟ್ ಎಷ್ಟು ಪ್ರಾಮುಖ್ಯತೆ ಹೊಂದಿದೆ ಎಂದು ಹಲವು ಉದಾಹರಣೆಗಳ ಮೂಲಕ ವಿವರಿಸಿದರು. ವಿದ್ಯಾರ್ಥಿಗಳು ಮತ್ತು ಬೋಧಕ ಸಿಬ್ಬಂದಿಗಳು ಸಂಪನ್ಮೂಲ ವ್ಯಕ್ತಿಯೊಂದಿಗೆ ಪ್ರಶ್ನೆಯೊತ್ತರ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರರಾವ್ ಮದಾನೆ ಮತ್ತು ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾರವರ ಉಪಸ್ಥಿತಿಯಲ್ಲಿ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಪ್ರೊ ತಿಮ್ಮಪ್ಪ ಡಿ. ಎಸ್. ರವರು ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಪ್ರಶಾಂತ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Exit mobile version