Kundapra.com ಕುಂದಾಪ್ರ ಡಾಟ್ ಕಾಂ

ಜ.23, 24ರಂದು ಎಫ್.ಡಿ.ಎ, ಎಸ್.ಡಿ.ಎ ಸ್ಪರ್ಧಾತ್ಮಕ ಪರೀಕ್ಷೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಜನವರಿ 23 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಅಜ್ಜರಕಾಡು ಡಾ ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಪಿ ಜಿ ಸೆಂಟರ್ ಹಾಗೂ ಜನವರಿ 24 ರಂದು ವಿವಿಧ ಇಲಾಖೆಗಳಲ್ಲಿನ ಸಹಾಯರು/ಪ್ರಥಮ ದರ್ಜೆ ಸಹಾಯಕರು, ಹಾಗೂ ಕಿರಿಯ ಸಹಾಯಕರು/ದ್ವಿತೀಯ ದರ್ಜೆ ಸಹಾಯಕರ ಸ್ಪರ್ಧಾತ್ಮಕ ಪರೀಕ್ಷೆಯು ಜಿಲ್ಲೆಯ ಒಟ್ಟು 11 ಪರೀಕ್ಷಾ ಕೇಂದ್ರಗಳಾದ ಉಡುಪಿ ಪೂರ್ಣಪ್ರಜ್ಞ ಕಾಲೇಜು, ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಪೂರ್ಣಪ್ರಜ್ಞ ಪಿ.ಯು ಕಾಲೇಜು, ಮಣಿಪಾಲ ಪ್ರಿ-ಯುನಿವರ್ಸಿಟಿ ಕಾಲೇಜು, ಉಡುಪಿ ಸರ್ಕಾರಿ ಪಿ.ಯು ಕಾಲೇಜು, ಕುಂಜಿಬೆಟ್ಟು ಟಿ.ಎ. ಪೈ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್, ಕಡಿಯಾಳಿ ಯು. ಕಮಲಾಬಾಯಿ ಹೈ ಸ್ಕೂಲ್, ಉಡುಪಿ ಸರ್ಕಾರಿ ಪಿ.ಯು ಕಾಲೇಜು ಫಾರ್ ಗರ್ಲ್ಸ್ ಹೈ ಸ್ಕೂಲ್ ಸೆಕ್ಷನ್, ಉಡುಪಿಯ ಕ್ರಿಶ್ಚಿಯನ್ ಹೈ ಸ್ಕೂಲ್, ಉಡುಪಿಯ ಸೈಂಟ್ ಸಿಸಿಲಿ ಹೈ ಸ್ಕೂಲ್ ಹಾಗೂ ಒಳಕಾಡು ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಲಿದೆ.

ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷಾ ಕೇಂದ್ರದೊಳಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಪರೀಕ್ಷಾ ಕೇಂದ್ರದ ಆವರಣದಲ್ಲಿ ಮೊಬೈಲ್ ಫೋನ್ ಹಾಗೂ ಇತರೆ ಎಲೆಕ್ಟ್ರಾನಿಕ್ ವಸ್ತುಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version