Site icon Kundapra.com ಕುಂದಾಪ್ರ ಡಾಟ್ ಕಾಂ

ಮಕ್ಕಳ ಸ್ನೇಹಿ ಅಭಿಯಾನ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗ್ರಾಮ ಪಂಚಾಯತ್‌ನಲ್ಲಿ ನಡೆಯುತ್ತಿರುವ ಮಕ್ಕಳ ಸ್ನೇಹಿ ಅಭಿಯಾನ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಉಡುಪಿ ಜಿಲ್ಲಾ ಕಾನೂನು ಪ್ರಾಧಿಕಾರದ ಅಧ್ಯಕ್ಷೆ ಕಾವೇರಿ ಭೇಟಿ ನೀಡಿದರು.

ಮಕ್ಕಳಿಗೆ ಶೈಕ್ಷಣಿಕ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸೂಕ್ತ ಕಾನೂನು ಮಾರ್ಗದರ್ಶನ, ಸಲಹೆ ಸೂಚನೆಗಳನ್ನು ನೀಡಿದ ಅವರು ಮಕ್ಕಳ ಚಟುವಟಿಕೆಗಳನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಮಕ್ಕಳ ಸ್ನೇಹಿ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಶುಭ ಹಾರೈಸಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗ್ರಾಪಂ ಅಭಿವೃದ್ಧಿ ಅಧಿಕಾರಿ ಚಂದ್ರಶೇಖರ, ಮಕ್ಕಳ ಮಿತ್ರ ಬಿ.ಲಕ್ಷ್ಮೀಕಾಂತ ಮಡಿವಾಳ, ಎಸ್.ವಿ.ಶಾಲೆಗಳ ಸಂಚಾಲಕ ಎನ್.ಸದಾಶಿವ ನಾಯಕ್, ಸ.ವಿ.ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಉಮೇಶ ಕರ್ಣಿಕ್, ಜಿಲ್ಲಾ ಶಿಕ್ಷಣ ಸಂಪನ್ಮೂಲ ಕೇಂದ್ರದ ಉಪಾಧ್ಯಕ್ಷೆ ತಿಲೋತ್ತಮ ನಾಯಕ್, ವಿದ್ಯಾರ್ಥಿ ಶ್ರೀಶ ಖಾರ್ವಿ ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭ ಉಡುಪಿ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶೆ ಕಾವೇರಿ ಅವರನ್ನು ಗೌರವಿಸಲಾಯಿತು.

Exit mobile version