Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಸುಧೀಂದ್ರ ತೀರ್ಥ ಶ್ರೀಗಳ ಆರಾಧನಾ ಮಹೋತ್ಸವ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಲ್ಲಿನ ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಪಂಚಮ ಪುಣ್ಯತಿಥಿ ಆರಾಧನಾ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಬೆಳಿಗ್ಗೆ ಸ್ತೋತ್ರ ಪಠಣ, ಮಧ್ಯಾಹ್ನ ಶ್ರೀದೇವರಿಗೆ ಮಹಾಮಂಗಳಾರತಿ, ಗುರುಪೂಜೆ, ಶ್ರೀಮದ್ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಭಾವಚಿತ್ರಕ್ಕೆ ಪುಷ್ಪ ಅರ್ಚನೆ, ಸಂತರ್ಪಣೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ಜರಗಿದವು. ದೇವಳದ ತಾಂತ್ರಿಕ ಜಿ.ರಾಘವೇಂದ್ರ ಎನ್.ಆಚಾರ್ಯ ಮತ್ತು ದೇವಳದ ಆಡಳಿತ ಮಂಡಳಿ ಸದಸ್ಯ ಡಾ.ಕಾಶೀನಾಥ ಪೈ ಶ್ರೀಗಳ ಗುಣಗಾನ ಮಾಡಿ ನುಡಿನಮನ ಸಲ್ಲಿಸಿದರು.

ದೇವಳದ ಪ್ರಧಾನ ಅರ್ಚಕ ಜಿ.ಮೋಹನದಾಸ ಭಟ್ ಮತ್ತು ಜಿ.ಪ್ರದೀಪ ಭಟ್ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಜರಗಿತು. ದೇವಳದ ಆಡಳಿತ ಮಂಡಳಿ ಸದಸ್ಯರು, ಊರಿನ ಹತ್ತು ಸಮಸ್ತರು, ಸಮಾಜಬಾಂಧವರು ಹಾಗೂ ಭಜಕರು ಶ್ರೀಗಳ ಆರಾಧಾನ ಮಹೋತ್ಸವದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

Exit mobile version