Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಜಲ ಜಾಗೃತಿ ಅರಿವು ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಘನತ್ಯಾಜ್ಯ ನಿರ್ವಹಣೆ, ಮಳೆ ನೀರು ಸಂಗ್ರಹ ಹಾಗೂ ಸೌರಶಕ್ತಿ ಬಳಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಬೇಕು. ನೀರು ಬೆಲೆ ಕಟ್ಟಲಾಗದ ಸಂಪನ್ಮೂಲವಾಗಿದ್ದು ಜನರು ಇದನ್ನು ಗಮನಿಸದಿರುವುದು ವಿಷಾದಕರ ಎಂದು ಗಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಹೇಳಿದರು.

ಗಂಗೊಳ್ಳಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಬೆಂಗಳೂರಿನ ಮಹಾತ್ಮ ಗಾಂಧಿ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ, ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಸ್ವಸಹಾಯ ಸಂಘದ ಸದಸ್ಯರಿಗೆ ಮತ್ತು ಗ್ರಾಮೀಣ ಮಹಿಳೆಯರಿಗೆ ನವೀಕರಿಸ ಬಹುದಾದ ಇಂಧನ, ಘನ ತ್ಯಾಜ್ಯ ನಿರ್ವಹಣೆ ಮತ್ತು ಮಳೆ ನೀರು ಸಂಗ್ರಹ’ ವಿಷಯದ ಅರಿವು ಮೂಡಿಸುವ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿ ಜೋಸೆಫ್ ಫರ್ನಾಂಡಿಸ್ ಮಾಹಿತಿ ನೀಡಿದರು. ಅಂಗನವಾಡಿ ಕಾರ್ಯಕರ್ತೆ ಫಿಲೋಮಿನಾ ಫರ್ನಾಂಡಿಸ್, ಭಾರತೀಯ ವಿಕಾಸ ಟ್ರಸ್ಟ್ನ ಮುಖ್ಯ ವ್ಯವಸ್ಥಾಪಕ ಅರುಣ್ ಪಟವರ್ಧನ್, ಸಂಯೋಜಕ ರಾಘವೇಂದ್ರ,ಕುಂದಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಶ್ವೇತಾ, ಭಾರತೀಯ ವಿಕಾಸ ಟ್ರಸ್ಟ್ನ ಅವಿನಾಶ್, ಪತ್ರಕರ್ತ ಬಿ. ರಾಘವೇಂದ್ರ ಪೈ ಇದ್ದರು.

Exit mobile version