ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಂದುಶ್ರೀ ಮಹಿಳಾ ಸಂಘ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಂಗೊಳ್ಳಿಯ ಶ್ರೀ ಇಂದುಧರ ದೇವಸ್ಥಾನದ ಸಭಾಂಗಣದಲ್ಲಿ ಶುಕ್ರವಾರ ಜರಗಿದ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಪುಣ್ಯಸ್ಮೃತಿ ಕಾರ್ಯಕ್ರಮ ನಡೆಯಿತು.
ಪುಷ್ಪನಮನ ಸಲ್ಲಿಸಿ ಮಾತನಾಡಿದ, ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗಂಗೊಳ್ಳಿ ಎ ಒಕ್ಕೂಟದ ಅಧ್ಯಕ್ಷೆ ಸುಮಿತ್ರಾ ಜಿ. ದೀನ ದಲಿತರ, ಮಕ್ಕಳ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಮಾತೃಶ್ರೀ ರತ್ನಮ್ಮ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳದ ಮೂಲಕ ಅವರ ಅಭಿವೃದ್ಧಿಗೆ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಅವರು ಮಾಡಿರುವ ಸತ್ಕಾರ್ಯಗಳು ಅವರನ್ನು ಇಂದು ಅಜರಾಮರನ್ನಾಗಿಸಿದೆ ಎಂದು ಹೇಳಿದರು.
ಸಂಘದ ಅಧ್ಯಕ್ಷೆ ಸುಶೀಲಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷೆ ಸರೋಜ ಜಿ.ಟಿ., ಗಂಗಾ ಬಿ., ಗೌರಿ ಬಿ., ರುದ್ರಮ್ಮ, ಮಮತಾ, ಭವಾನಿ, ನೇತ್ರಾವತಿ ಮತ್ತಿತರರು ಉಪಸ್ಥಿತರಿದ್ದರು. ಸುಶೀಲಾ ಸ್ವಾಗತಿಸಿದರು. ಕಾರ್ಯದರ್ಶಿ ನಾಗಿಣಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.