ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ 2020-21ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಉದ್ಘಾಟನೆ ನಡೆಯಿತು.
ಉದ್ಘಾಟಿಸಿ ಮಾತನಾಡಿದ ಬಿದ್ಕಲ್‌ಕಟ್ಟೆಯ ರಾಜ್ಯಶಾಸ್ತ್ರ ಉಪನ್ಯಾಸಕರಾದ ರಾಘವೇಂದ್ರ ಕಿಣಿ, ಯೋಜನೆಯ ಉದ್ದೇಶ ಪ್ರಯೋಜನದ ಕುರಿತು ಹಾಗೂ ದೇಶದ ಭವಿಷ್ಯಕ್ಕೆ ಪರಿಶುದ್ಧ ಮತ್ತು ಕಡ್ಡಾಯ ಮತದಾನ ಅಗತ್ಯ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂಘಟನೆಯ ಪ್ರವೃತ್ತಿ ರೂಡಿಸಿಕೊಳ್ಳಬೇಕು. ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಶಮೀರ್ ಘಟಕದ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಯೋಜನಾಧಿಕಾರಿ ಸಂದೀಪ ಕುಮಾರ ಶೆಟ್ಟಿ ಪ್ರಾಸ್ತಾವಿಕವಾಗಿ ನುಡಿದರು. ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿ ಕಾರ್ಯದರ್ಶಿ ಮೊಹಮ್ಮದ ಅಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು ವಿದ್ಯಾರ್ಥಿನಿ ಕಾವ್ಯಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕಾರ್ತಿಕ್ ಸ್ವಾಗತಿಸಿ, ವಿದ್ಯಾರ್ಥಿನಿ ನಮಿತಾ ವಂದಿಸಿದರು.