Site icon Kundapra.com ಕುಂದಾಪ್ರ ಡಾಟ್ ಕಾಂ

ಯುವ ಬರಹಗಾರರ ಚೊಚ್ಚಲ ಕೃತಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ 2020ನೇ ಸಾಲಿನಲ್ಲಿ 18ರಿಂದ 40 ವರ್ಷಗಳ ವಯೋಮಿತಿಯೊಳಗಿನ ಯುವಬರಹಗಾರರು ಕನ್ನಡ ಸಾಹಿತ್ಯದಲ್ಲಿ ರಚಿಸಿರುವ ಚೊಚ್ಚಲ ಕೃತಿಗಳಾದ ಕಥೆ, ಕಾದಂಬರಿ, ಕವನ, ನಾಟಕ, ವಿಮರ್ಶಾ ಲೇಖನ, ಪ್ರಬಂಧ ಮುಂತಾದ ಸಾಹಿತ್ಯದ ಪ್ರಕಾರಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಫೆಬ್ರವರಿ 20 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಧಿಕಾರದ ವೆಬ್‌ಸೈಟ್ http://www.kannadapustakapradhikara.com ಅಥವಾ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು ದೂರವಾಣಿ ಸಂಖ್ಯೆ: 080-22484516 / 22107704 ಅನ್ನು ಸಂಪರ್ಕಿಸುವಂತೆ ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ.ಕಿರಣ್ ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version