Kundapra.com ಕುಂದಾಪ್ರ ಡಾಟ್ ಕಾಂ

ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರನ್ನು ನೊಂದಣಿ ಮಾಡಿ: ಶಂಭು ಭಟ್

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ 18 ವರ್ಷ ತುಂಬಿದ ಎಲ್ಲಾ ಯುವಕ ಯುವತಿಯರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಮೂಲಕ, ಹೆಚ್ಚಿನ ಸಂಖ್ಯೆಯಲ್ಲಿ ಯುವ ಮತದಾರರ ನೊಂದಾವಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ, ರಾಜ್ಯ ಚುನಾವಣಾ ಆಯೋಗದ ಜಂಟಿ ಮುಖ್ಯ ಚುನಾವಣಾಧಿಕಾರಿ ಶಂಭು ಭಟ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ, ಜಿಲ್ಲೆಯ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ನಡೆದ, ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಯಾವುದೇ ಲೋಪದೋಷಗಳಾಗದಂತೆ ಎಚ್ಚರಿಕೆ ವಹಿಸಬೇಕು. ಇ-ಎಪಿಕ್ ಕಾರ್ಡ್ ಕುರಿತಂತೆ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಿ, ಕಾರ್ಡ್ ಪಡೆಯುವಂತೆ ತಿಳಿಸಿ ಎಂದರು.

ಸಭೆಯಲ್ಲಿ ಉಪ ಮುಖ್ಯ ಚುನಾವಣಾಧಿಕಾರಿ ಲಕ್ಷ್ಮಿಮಶ್ವರ, ದಿನೇಶ್ ಚಂದ್ರ, ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಜಿಲ್ಲೆಯ ಎಲ್ಲಾ ತಹಶೀಲ್ದಾರ್‌ಗಳು ಉಪಸ್ಥಿತರಿದ್ದರು.

ಸಭೆಯ ನಂತರ ಮತದಾರರ ಪಟ್ಟಿಯ ಪರಿಶೀಲನೆ ಕುರಿತಂತೆ, ಉಡುಪಿಯ ಶಿವಳ್ಳಿ ಸೇರಿದಂತೆ ವಿವಿಧ ಭಾಗದ ಸಾರ್ವಜನಿಕರ ಮನೆಗಳಿಗೆ ಭೇಟಿ ನೀಡಿ, ಮತದಾರರ ಪಟ್ಟಿಯಲ್ಲಿ ಮತದಾರರು ವಾಸವಿರುವ ಬಗ್ಗೆ ಪರಿಶೀಲನೆ ನಡೆಸಿದರು. ಭೇಟಿ ಸಂದರ್ಭದಲ್ಲಿ ಉಡುಪಿ ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಉಪಸ್ಥಿತರಿದ್ದರು.

Exit mobile version