ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ ಇವರ ಸಹಯೋಗದಲ್ಲಿ ಕುಂದಾಪುರ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಎ.ವಿ. ಹಾಲ್‌ನಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಪಿ ನಾರಾಯಣ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಕುಂದಾಪುರ ವಕೀಲ ಟಿ. ಮಂಜುನಾಥ ಗಿಳಿಯಾರು, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಡಾ. ರೇಖಾ ವಿ. ಬನ್ನಾಡಿ ಉಪಸ್ಥಿತರಿದ್ದರು. ರೋಹಿಣಿ ಶರಣ ನಿರೂಪಿಸಿದರು.