Site icon Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ಕಛೇರಿ ಸಿಬ್ಬಂದಿಗೆ ಬೀಳ್ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಂಗ ಸಂಸ್ಥೆಗಳಾದ ಎಚ್.ಎಮ್.ಎಮ್. ಆಂಗ್ಲ ಮಾಧ್ಯಮ ಶಾಲೆ, ವಿ.ಕೆ. ಆರ್ ಹೈಸ್ಕೂಲ್, ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಮತ್ತು ಡಾ ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ 25 ವರ್ಷಗಳ ಕಾಲ ಕಛೇರಿ ಸಿಬ್ಬಂದಿಯಾಗಿ ಸೇವೆ ಸಲ್ಲಿಸಿ, ವಯೋನಿವೃತ್ತಿ ಹೊಂದಿದ ಅಣ್ಣಪ್ಪ ಇವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಈ ಸಂದರ್ಭ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಕಛೇರಿ ಮೇಲ್ವಿಚಾರಕರಾದ ಗಾಯತ್ರಿ ಶೇಟ್, ಸಿಬ್ಬಂದಿ ಸಂಘದ ಕಾರ್ಯದರ್ಶಿ ಸತೀಶ್ ಕಾಂಚನ್ ಉಪಸ್ಥಿತರಿದ್ದರು.
ವಾಣಿಜ್ಯ ಉಪನ್ಯಾಸಕರುಗಳಾದ ಸತೀಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ, ಕು. ಧನಶ್ರೀ ಮಾಧವ ಕಿಣಿ ವಂದಿಸಿದರು.

Exit mobile version