Kundapra.com ಕುಂದಾಪ್ರ ಡಾಟ್ ಕಾಂ

ಲೈಂಗಿಕ ದೌರ್ಜನ್ಯ ವಿರೋಧಿ ಜಾಗೃತಿ: ವಿಶೇಷ ಉಪನ್ಯಾಸ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಉದ್ಯೋಗ ಮತ್ತು ಇತರ ಕ್ಷೇತ್ರಗಳಲ್ಲಿ ಮಹಿಳೆಯರು ಅನುಭವಿಸುತ್ತಿರುವ ಕಿರುಕುಳಗಳ ಬಗ್ಗೆ ಜಾಗೃತರಾಗುತ್ತಾ ತಮ್ಮ ಹಕ್ಕು ಮತ್ತು ಬಾಧ್ಯತೆಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕು, ಹದಿ-ಹರೆಯದ ಯುವ ಜನಾಂಗ ಲೈಂಗಿಕತೆ ಮತ್ತು ತಮ್ಮ ವೇಷ-ಭೂಷಣ, ಭಾಷೆಗಳ ಕುರಿತು ಜಾಗೃತರಾಗಬೇಕು. ಪದವಿ ವ್ಯಾಸಂಗದ ಸಂದರ್ಭದಲ್ಲೇ ಈ ಕುರಿತು ವಿದ್ಯಾರ್ಥಿಗಳು ಎಚ್ಚರ ವಹಿಸಬೇಕು ಎಂದು ಉಡುಪಿ ಡಾ. ಎ. ವಿ. ಬಾಳಿಗಾ ಸಮೂಹ ಸಂಸ್ಥೆಯ ಆಡಳಿತಾಧಿಕಾರಿ ಸೌಜನ್ಯ ಶೆಟ್ಟಿ ಹೇಳಿದರು.

ಅವರು ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಲೈಂಗಿಕ ದೌರ್ಜನ್ಯ ವಿರೋಧಿ ಘಟಕದ ಆಶ್ರಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ವಿರೋಧಿ ಜಾಗೃತಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಉಪಸ್ಥಿತರಿದ್ದರು.

ಲೈಂಗಿಕ ದೌರ್ಜನ್ಯ ವಿರೋಧಿ ಘಟಕದ ಸಂಯೋಜಕಿ ಜ್ಯೋತಿ ಮೊಗವೀರ ಸ್ವಾಗತಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಶ್ವೇತಾ ಯು. ವಂದಿಸಿದರು. ವಿದ್ಯಾರ್ಥಿಗಳಾದ ಸುಶಾಂತ್ ಅತಿಥಿಗಳನ್ನು ಪರಿಚಯಿಸಿ, ಸುಚಿತ್ರಾ ಕಾರ್ಯಕ್ರಮ ನಿರೂಪಿಸಿದರು.

Exit mobile version