Kundapra.com ಕುಂದಾಪ್ರ ಡಾಟ್ ಕಾಂ

ಫೆ.12 – 13: ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಫರ್ಧೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯು ಫೆಬ್ರವರಿ 12 ಮತ್ತು 13ರಂದು ಉಡುಪಿ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕ್ರೀಡಾಕೂಟವನ್ನು ಫೆಬ್ರವರಿ 12ರಂದು ಬೆಳಗ್ಗೆ 10 ಗಂಟೆಗೆ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದು, ಉಡುಪಿ ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಭಾಗವಹಿಸಲಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ ಹಾಗೂ ಆಯಾ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರನ್ನು ಸಂಪರ್ಕಿಸುವಂತೆ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಮಣ್ಯ ಶೇರಿಗಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version