Site icon Kundapra.com ಕುಂದಾಪ್ರ ಡಾಟ್ ಕಾಂ

ಮೂಡ್ಲಕಟ್ಟೆ ಎಂಐಟಿ ಕಾಲೇಜಿನಲ್ಲಿ ಸ್ವಚ್ಛತಾ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ತಾಂತ್ರಿಕ ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಇತ್ತೀಚೆಗೆ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾಲೇಜಿನಿಂದ ಮೂಡ್ಲಕಟ್ಟೆ ಜನಾರ್ದನ ದೇವಸ್ಥಾನದ ತನಕ ರಸ್ತೆ ಅಕ್ಕಪಕ್ಕದ ಪ್ಲಾಸ್ಟಿಕ್ ಇನ್ನಿತರ ತ್ಯಾಜ್ಯ ವಸ್ತುಗಳನ್ನು ವಿಲೇವಾರಿ ಮಾಡಿದ್ದಲ್ಲದೆ, ದೇವಸ್ಥಾನದ ಆವರಣವನ್ನು ಸ್ವಚ್ಛಗೊಳಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ, ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಅಧಿಕಾರಿ ಪ್ರೊ. ಬಾಲನಾಗೇಶ್ವರ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ಡೀನ್, ಸಿಬಂದಿ ವರ್ಗ ಹಾಗೂ ಪ್ರಥಮ ವರ್ಷದ ವಿಧ್ಯಾರ್ಥಿ ಸ್ವಯಂಸೇವಕರು ಪಾಲ್ಗೊಂಡಿದ್ದರು.

Exit mobile version