Site icon Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ , ಉಡುಪಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಘಟಕದ ವತಿಯಿಂದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಸಮಾಜ ಕಾರ್ಯಕರ್ತೆ ಶೈಲಾ ಶ್ಯಾಮನೂರು ಮಾತನಾಡಿ, ಜೊತೆಗೆ ವಿದ್ಯಾರ್ಥಿಗಳಿಗೆ ಕೋಟ್ಪಾ-2003 ಕಾಯ್ದೆಯ ಕುರಿತು ಮಾಹಿತಿ ನೀಡಿ ತಂಬಾಕು ವರ್ಜನೆಯತ್ತ ವಿದ್ಯಾರ್ಥಿಗಳು ಹೆಜ್ಜೆಯನ್ನಿಡುವುದರ ಮೂಲಕ ತಂಬಾಕು ಮುಕ್ತ ಶೈಕ್ಷಣಿಕ ಆವರಣ ನಿಮ್ಮದಾಗಬೇಕು ಎಂದು ತಿಳಿಸಿದರು. ವಿದ್ಯಾರ್ಥಿಗಳಿಗೆ ತಂಬಾಕು ಉತ್ಪನ್ನಗಳ ಉಪಯೋಗದಿಂದ ಆರೋಗ್ಯದ ಮೇಲೆ ಉಂಟಾಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿದರು.

Exit mobile version