Kundapra.com ಕುಂದಾಪ್ರ ಡಾಟ್ ಕಾಂ

ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು: ರಸ್ತೆ ಸುರಕ್ಷತಾ ಜಾಗೃತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರಸ್ತೆ ಅಪಘಾತದಲ್ಲಿ ಯುವಜನತೆಯೇ ಹೆಚ್ಚು ಸಾವಿಗೀಡಾಗುತ್ತಿರುವುದು ವಿಷಾದನೀಯ, ರಸ್ತೆಯ ಸಾಮಾನ್ಯ ನಿಯಮಗಳಾದ ಹೆಲ್ಮೆಟ್, ಸೀಟ್‌ಬೆಲ್ಟ್ ಧರಿಸುವುದು, ವೇಗದ ಮಿತಿ ಕಡಿಮೆಗೊಳಿಸುವುದು ಇಂತಹ ಸರಳ ನಿಯಮಗಳ ಮೂಲಕ ಅಮೂಲ್ಯವಾದ ಜೀವನ ರಕ್ಷಣೆಯಾಗಬೇಕು ಎಂದು ಕುಂದಾಪುರ ಸಂಚಾರಿ ಪೊಲೀಸ್ ಅಧಿಕಾರಿಯಾದ ಸುದರ್ಶನ್ ಡಿ. ಎನ್. ಹೇಳಿದರು.

ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಯೋಜನಾ ಘಟಕ ಆಯೋಜಿಸಿದ ರಸ್ತೆ ಸುರಕ್ಷತಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪೊಲೀಸ್ ಉಪನಿರೀಕ್ಷಕ, ಸದಾಶಿವ ಗವರೋಜಿ, ಪೊಲೀಸ್ ಸಿಬ್ಬಂದಿ ನವೀನ್ ಕೊಡ ಸಂಚಾರಿ ನಿಯಮಗಳ ಪಾಲನೆಯ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿಯಾದ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿ, ಕನ್ನಡ ಉಪನ್ಯಾಸಕ ಸುಕುಮಾರ ಶೆಟ್ಟಿ ವಂದಿಸಿದರು. ಎನ್.ಎಸ್.ಎಸ್. ಸಹ ಯೋಜನಾಧಿಕಾರಿಯಾದ ರೇಷ್ಮಾ ಶೆಟ್ಟಿ ನಿರೂಪಿಸಿದರು.

Exit mobile version