ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಆರ್ಥಿಕವಾಗಿ ಸಂಸ್ಥೆಯನ್ನು ಕಟ್ಟಿ ಸದೃಢವಾಗಿ ಬೆಳೆಸಿದ ಸಂಸ್ಥೆಯ ಸ್ಥಾಪಕರು ಹಾಗೂ ಸಂಸ್ಥೆಯಲ್ಲಿ ಸೇವೆ ಸಲ್ಲಿಸಿದವರನ್ನು ಸ್ಮರಿಸಿಕೊಳ್ಳಬೇಕು. ಸಂಸ್ಥಾಪಕರ ಧ್ಯೇಯೋದ್ದೇಶಗಳನ್ನು ಈಡೇರಿಸುವಲ್ಲಿ ಆಡಳಿತ ವರ್ಗ ಶ್ರಮಿಸಬೇಕು. ಅನೇಕ ಕುಟುಂಬಗಳಿಗೆ ಬೆಳಕಾಗಿ, ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ ಸಹಕಾರಿ ರಂಗದಲ್ಲಿ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕ್ ಅಮೃತ ಮಹೋತ್ಸವ ವರ್ಷ ಆಚರಿಸುತ್ತಿರುವುದು ಗ್ರಾಹಕರು ಈ ಸಂಸ್ಥೆಯ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದು ಸ್ಟೇಟ್ ಬ್ಯಾಂಕಿನ ನಿವೃತ್ತ ಅಧಿಕಾರಿ ಗಣಪತಿ ಶೇರುಗಾರ್ ಗಂಗೊಳ್ಳಿ ಹೇಳಿದರು.
ಅವರು ಗಂಗೊಳ್ಳಿಯ ಶ್ರೀ ಶಾರದಾ ಮಂಟಪದಲ್ಲಿ ಗಂಗೊಳ್ಳಿ ಸೇವಾ ಸಹಕಾರಿ ಬ್ಯಾಂಕಿನ ಅಮೃತ ಮಹೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಬ್ಯಾಂಕಿನ ಅಧ್ಯಕ್ಷ ಆನಂದ ಬಿಲ್ಲವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ವಾಸುದೇವ ಶೇರುಗಾರ್, ನಿರ್ದೇಶಕರಾದ ಹರೀಶ ಮೇಸ್ತ, ಮಾಧವ ಖಾರ್ವಿ, ಶ್ರೀನಿವಾಸ ಜತ್ತನ್, ಚಂದ್ರಶೇಖರ ಪೂಜಾರಿ, ನಾಗರಾಜ ಪೂಜಾರಿ, ಗೋಪಾಲ ನಾಯ್ಕ್, ಆಶಾಲತಾ, ಯಮುನಾ, ನಾಗರಾಜ ಎಂ., ಲಕ್ಷ್ಮಣ ಹಾಗೂ ಬ್ಯಾಂಕಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.
ನಿರ್ದೇಶಕ ಸುಭಾಶ್ಚಂದ್ರ ಪೂಜಾರಿ, ಸ್ವಾಗತಿಸಿದರು. ಪತ್ರಕರ್ತ ಸುಬ್ರಹ್ಮಣ್ಯ ಪಡುಕೋಣೆ ಕಾರ್ಯಕ್ರಮ ನಿರ್ವಹಿಸಿದರು. ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ದಯಾನಂದ ಗಾಣಿಗ ವಂದಿಸಿದರು.