ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕು 74 ಉಳ್ಳೂರು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ಪ್ರಸಾದ ಶೆಟ್ಟಿ ಕಟ್ಟಿನಬೈಲು, ಉಪಾಧ್ಯಕ್ಷರಾಗಿ ರತ್ನ ಶೇಖರ ನಾಯ್ಕ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.
ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ 74ಉಳ್ಳೂರು ಗ್ರಾಮ ಪಂಚಾಯತಿ ಕಚೇರಿಯಲ್ಲಿ ನಡೆಯಿತು. ಚುನಾವಣಾಧಿಕಾರಿಯಾಗಿ ಸಿದ್ಧಾಪುರ ನೀರಾವರಿ ಇಲಾಖಾ ಇಂಜಿನಿಯರ್ ಭಾನು ನಾಯಕ್ ಭಾಗವಹಿಸಿದ್ದರು.
74 ಉಳ್ಳೂರು ಗ್ರಾಮ ಪಂಚಾಯತಿ ಒಟ್ಟು 9 ಸದಸ್ಯ ಸ್ಥಾನವನ್ನು ಹೊಂದಿದೆ. ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ‘ಅ’ ಮಹಿಳೆಗೆ ಮೀಸಲಾಯಿತು.