Kundapra.com ಕುಂದಾಪ್ರ ಡಾಟ್ ಕಾಂ

ತಲ್ಲೂರು ನಾರಾಯಣ ವಿಶೇಷ ಮಕ್ಕಳ ಶಾಲೆ: ಆರೋಗ್ಯ ಮಾಹಿತಿ ಅರಿವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಲ್ಲೂರು ಫ್ಯಾಮಿಲಿ ಟ್ರಸ್ಟ್ ಮತ್ತು ರೋಟರಿ ಸಮುದಾಯದಳ ತಲ್ಲೂರು ಇವರ ಆಶ್ರಯದಲ್ಲಿ ನಾರಾಯಣ ವಿಶೇಷ ಶಾಲೆಯ ಮಕ್ಕಳ ಷೋಷಕರಿಗಾಗಿ ಆರೋಗ್ಯ ಮಾಹಿತಿ ಅರಿವು ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕುಂದಾಪುರ ಮಕ್ಕಳ ತಜ್ಞರಾದ ಡಾ.ಎಚ್. ರಾಘವೇಂದ್ರ ಹೆಬ್ಬಾರ್, ವಿಶೇಷ ಮಕ್ಕಳ ಪಾಲನೆ ಪೋಷಣಿ, ಮತ್ತು ಮಕ್ಕಳ ಆಹಾರ ಪದ್ಧತಿಯ ಬಗ್ಗೆ ಮಾಹಿತಿಯನ್ನು ನೀಡಿದರು, ಅಲ್ಲದೇ ಪೋಷಕರ ವಿವಿಧ ಪ್ರಶ್ನೆಗಳಿಗೆ ಸೂಕ್ತವಾದ ವಿವರಣೆಯನ್ನು ನೀಡಿ ಸಂದೇಹಗಳಿಗೆ ಪರಿಹಾರ ಸೂಚಿಸಿದರು.

ತಲ್ಲೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತಾ ಕಾರ್ಯಕರ್ತರಾದ ಅನಿತಾ, ಗಿರಿಜಾ, ಶ್ರೀವಿತಾ ಮತ್ತು ಹರ್ಪಿತಾ ಇವರ ಸೇವೆಯನ್ನು ಗುರುತಿಸಿ, ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ, ಉಪ್ಪಿನಕುದ್ರು ಗೂಂಬೆಯಾಟ ಆಕಾಡೆಮಿಯ ಭಾಸ್ಕರ ಕೂಗ್ಗ ಕಾಮತ್ ಅವರು ವಿಶೇಷ ಮಕ್ಕಳ ಬಗೆಗಿನ ಹೆತ್ತವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಧೈರ್ಯ ಕುಂದದೆ ವೈದ್ಯರ ಸಲಹೆ ಸೂಚನೆಗಳನ್ನು ಪಾಲಿಸಬೇಕು ಮತ್ತು ವಿಶೇಷ ಕಾಳಜಿ ವಹಿಸಬೇಕು ಎಂದು ತಿಳಿಸಿದರು. ಮತ್ತೂರ್ವ ಮುಖ್ಯ ಅತಿಥಿಗಳಾದ ನಿವೃತ್ತ ಅಸಿಸ್ಟೆಂಟ್ ಕಮಿಷನರ್ ಪ್ರಭಾತ್ ಶೆಟ್ಟಿ,ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.

ಸಭೆಯಲ್ಲಿ ತಲ್ಲೂರು ಗ್ರಾಮಪಂಚಾಯತ್ ಸದಸ್ಯರಾದ ಜುಡಿತ್ ಮೇಂಡೊನ್ಸಾ, ರೋಟರಿ ಸಮುದಾಯ ದಳ ತಲ್ಲೂರು ಇದರ ಸಭಾಪತಿ ಓಝಲಿನ್ ರೆಬೆಲ್ಲೊ ಉಪಸ್ಥಿತರಿದ್ದರು. ತಲ್ಲೂರು ಫ್ಯಾಮಿಲಿ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ಸುರೇಶ್ ತಲ್ಲೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಆಡಳಿತಾಧಿಕಾರಿ ಚಂದ್ರಶೇಖರ್ ಸ್ವಾಗತಿಸಿದರು, ಟ್ರಸ್ಟಿ ಮನೋರಮ ವಂದಿಸಿದರು. ಮುಖ್ಯ ಶಿಕ್ಷಕಿ ಪ್ರೇಮಾ ಕಾರ್ಯಕ್ರಮ ನಿರೂಪಿಸಿದರು.

Exit mobile version