Kundapra.com ಕುಂದಾಪ್ರ ಡಾಟ್ ಕಾಂ

ನಾಡ ಗ್ರಾ. ಪಂ: ಅಧ್ಯಕ್ಷರಾಗಿ ದಿನೇಶ ಶೆಟ್ಟಿ, ಉಪಾಧ್ಯಕ್ಷರಾಗಿ ಪದ್ದು ಪೂಜಾರ್ತಿ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ನಾಡಾ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ದಿನೇಶ ಶೆಟ್ಟಿ, ಉಪಾಧ್ಯಕ್ಷರಾಗಿ ಪದ್ದು ಪೂಜಾರ್ತಿ ಆಯ್ಕೆಗೊಂಡಿದ್ದಾರೆ.

ಒಟ್ಟು 19 ಸದಸ್ಯ ಬಲ ಹೊಂದಿರುವ ನಾಡ ಗ್ರಾಮ ಪಂಚಾಯಿತಿಯಲ್ಲಿ 14 ಬಿಜೆಪಿ ಬೆಂಬಲಿತ 3 ಕಾಂಗ್ರೇಸ್ ಬೆಂಬಲಿತ ಹಾಗೂ 2 ಸಿಪಿಎಂ ಬೆಂಬಲಿತರು ಆಯ್ಕೆಯಾಗಿದ್ದರು.

ಮೀಸಲಾತಿ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ ಮಹಿಳೆ ಮೀಸಲಾತಿ ನಿಗದಿಯಾಗಿತ್ತು.

Exit mobile version