Kundapra.com ಕುಂದಾಪ್ರ ಡಾಟ್ ಕಾಂ

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಾರಿಗೆ ಬಸ್ ಡಿಕ್ಕಿ. ಅಪಾಯದಿಂದ ಪಾರು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಇನೋವಾ ಕ್ರಿಸ್ಟಾ ಕಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಘಟನೆ ಬಿಡದಿ ಸಮೀಪದ ಕದಂಬ ಹೋಟೆಲ್ ಮುಂಭಾಗದಲ್ಲಿ ಶುಕ್ರವಾರ ಸಂಜೆ ನಡೆದಿದೆ.

ಬೆಂಗಳೂರಿನಲ್ಲಿ ವಿವಿಧ ಸರಕಾರಿ ಕಾರ್ಯಕ್ರಮಗಳನ್ನು ಮುಗಿಸಿ ಸಂಜೆ ವೇಳೆಗೆ ಮಂಗಳೂರಿಗೆ ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಬಿಡದಿ ಸಮೀಪ ಕಾರಿಗೆ ಇಂಧನ ಹಾಕಿಸಿಕೊಂಡು ಸಂಚರಿಸುತ್ತಿದ್ದ ಸಂದರ್ಭ ಬೆಂಗಳೂರಿನಿಂದ ಮೈಸೂರು ಕಡೆಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಸಚಿವರು, ಕಾರಿನ ಚಾಲಕ ಸೇರಿದಂತೆ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ಕಾರಿನ ಒಂದು ಭಾಗ ಸಂಪೂರ್ಣ ಜಖಂಗೊಂಡಿದೆ. ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Exit mobile version