Site icon Kundapra.com ಕುಂದಾಪ್ರ ಡಾಟ್ ಕಾಂ

ಎಸ್‌ಡಿಎಂಸಿ ಸದಸ್ಯರಿಗೆ ತರಬೇತಿ ಕಾರ್ಯಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಜಡ್ಕಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೆಕ್ಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಎಸ್‌ಡಿಎಂಸಿ ಸದಸ್ಯರ ತರಬೇತಿ ಕಾರ್ಯಗಾರ ನಡೆಯಿತು.

ಎಸ್‌ಡಿಎಂಸಿ ಅಧ್ಯಕ್ಷೆ ರಾಧಾ ಅಧ್ಯಕ್ಷತೆ ವಹಿಸಿದ್ದರು. ಸ್ಥಾಪಕ ಎಸ್‌ಡಿಎಂಸಿ ಅಧ್ಯಕ್ಷರಾದ ಎಂ. ಜೆ. ಬೇಬಿ ಕಾರ್ಯಕ್ರಮ ಉದ್ಘಾಟಿಸಿದರು.

ಸ. ಹಿ. ಪ್ರಾ. ಶಾಲೆ ಸಳ್ಕೊಡು ಇಲ್ಲಿನ ಎಸ್.ಡಿ.ಎಂ.ಸಿ ನಿಕಟಪೂರ್ವ ಅಧ್ಯಕ್ಷರಾದ ಮಾಲತಿ ಚಂದ್ರ ಶೆಟ್ಟಿ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಜಗದೀಶ್, ಶಾಲಾ ಮುಖ್ಯೋಪಾಧ್ಯಾಯರಾದ ದೇವಕಿ ಟೀಚರ್ ಉಪಸ್ಥಿತರಿದ್ದರು. ಸ ಹಿ ಪ್ರಾ ಶಾಲೆ ಸಳ್ಕೊಡು ಇಲ್ಲಿನ ಮುಖ್ಯೋಪಾಧ್ಯಾಯರಾದ ಭಾಸ್ಕರ್ ನಾಯ್ಕ್ ತರಬೇತಿ ನೀಡಿದರು. ರಾಮ ಶೆಟ್ಟಿ ಅತ್ತಿಕಾರ್ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ದೇವಕಿ ಸ್ವಾಗತಿಸಿ ವಂದಿಸಿದರು.

Exit mobile version