Kundapra.com ಕುಂದಾಪ್ರ ಡಾಟ್ ಕಾಂ

ಬಿಜೆಪಿಯದ್ದು ರೈತ ವಿರೋಧಿ ನೀತಿ: ಜನಧ್ವನಿ ಪಾದಯಾತ್ರೆಯಲ್ಲಿ ಸೊರಕೆ ಆರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೈತರ ಹಿತಾಸಕ್ತಿಗೆ ಮಾರಕವಾಗಿರುವ ರೈತ ವಿರೋಧಿ ಕಾಯ್ದೆಗಳ ಹಿಂಪಡೆಯಲು ಆಗ್ರಹಿಸಿ ದೇಶದಾದ್ಯಂತ ರೈತರು ನಡೆಸುತ್ತಿರುವ ಹೋರಾಟವನ್ನು ವ್ಯವಸ್ಥಿತವಾಗಿ ಹತ್ತಿಕ್ಕಲು ಪ್ರಯತ್ನಿಸುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ ರೈತ ವಿರೋಧಿ ಧೋರಣೆಗಳನ್ನು ಮುಂದುವರಿಸುತ್ತಿದೆ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ಆರೋಪಿಸಿದರು.

ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಹೆಜಮಾಡಿಯಿಂದ ಬೈಂದೂರುವರೆಗೆ ಸಾಗುವ ಜನಧ್ವನಿ ಪಾದಯಾತ್ರೆ ಗುರುವಾರ ಸಂಜೆ ಕುಂದಾಪುರ ತಲುಪಿದ ಸಂದರ್ಭದಲ್ಲಿ ಅವರು ಶಾಸ್ತ್ರಿ ಸರ್ಕಲ್ ಬಳಿ ನಡೆದ ಸಭೆಯಲ್ಲಿ ಮಾತನಾಡಿದರು.

ವಿಧಾನ ಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪ್ಚಂದ್ರ ಶೆಟ್ಟಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕಕುಮಾರ ಕೊಡವೂರು, ವಕೀಲ ಸುಧೀರ್ ಕುಮಾರ್ ಮರೋಳಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಹರಿಪ್ರಸಾದ್ ಶೆಟ್ಟಿ, ಶಂಕರ ಕುಂದರ್ ಕೋಟ, ಬಿ.ಹರಿಯಣ್ಣ, ಎಂ.ಎ ಗಫೂರ್, ಮಲ್ಯಾಡಿ ಶಿವರಾಮ ಶೆಟ್ಟಿ, ವರೋನಿಕಾ ಕರ್ನೋಲಿಯ, ದೇವಕಿ ಪಿ ಸಣ್ಣಯ್ಯ, ಮೊದಲಾದವರು ಇದ್ದರು.

Exit mobile version