ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಲಲಿತ ಕಲಾರಂಗ ಕಾರ್ಯಕ್ರಮ ನಡೆಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಕುಂದಪ್ರಭಾ ವಾರಪತ್ರಿಕೆ ಸಂಪಾದಕರಾದ ಯು.ಎಸ್.ಶೆಣೈ ಮಾತನಾಡಿ, ಅಂಕಗಳಿಕೆಯೊಂದೇ ವಿದ್ಯಾರ್ಥಿಗಳ ಸಾಧನೆಯಾಗಿರದೆ ಲಲಿತಕಲೆಗಳೊಂದಿಗೆ ಬದುಕನ್ನು ಸಂಭ್ರಮಿಸಬೇಕು ಎಂದು ನುಡಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಹಾಜಿ ಅಬ್ದುಲ್ ರೆಹಮಾನ್ ಮಾತನಾಡಿ, ಪಠ್ಯೇತರ ಚಟುವಟಿಕೆ ವಿದ್ಯಾರ್ಥಿಗಳ ಭವಿಷ್ಯದ ಶ್ರೇಷ್ಠತೆಗೆ ಕಾರಣವಾಗುತ್ತದೆ ಎಂದು ನುಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶಮೀರ್ ಹಾಗೂ ಲಲಿತ ಕಲಾರಂಗದ ಸಂಘಟಕ ಡಾ.ಸಂದೀಪ್ ಕುಮಾರ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕಾರ್ತಿಕ್ ಸ್ವಾಗತಿಸಿದರು. ವಿದ್ಯಾರ್ಥಿ ಕಾರ್ಯದರ್ಶಿ ಕುಮಾರಿ ಕಾವ್ಯಾ ಸ್ವಾಗತಿಸಿ, ವಿದ್ಯಾರ್ಥಿನಿ ಸಾಯಿಮಾ ವಂದಿಸಿದರು. ವಿದ್ಯಾರ್ಥಿನಿ ಶ್ರೇಯಾ ಕಾರ್ಯಕ್ರಮ ನಿರೂಪಿಸಿದರು.