Kundapra.com ಕುಂದಾಪ್ರ ಡಾಟ್ ಕಾಂ

ಪುತ್ತೂರು ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಕುಂದಾಪುರ ಐಎಂಎ ಪ್ರತಿಭಟನೆ

ಕುಂದಾಪುರ: ಆಗಸ್ಟ್ 1ರಂದು ಪುತ್ತೂರಿನಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಕ್ಷುಲಕ ಕಾರಣಕ್ಕೆ ಹಲ್ಲೆ ನಡೆಸಿದ ಆರೋಪಿಗಳಾದ ಮೊಹಮ್ಮದ್ ಇಕ್ಬಾಲ್ ಮತ್ತು ಸಹಚರರ ವಿರುದ್ಧ ದೂರು ದಾಖಲಾದರೂ ಈವರೆಗೆ ಬಂದಿಸಿಲ್ಲ. ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ ನಡೆಸಿದವರನ್ನು ತಕ್ಷಣ ಬಂಧಿಸಿ, ಸೂಕ್ತ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿ ಕುಂದಾಪುರ ಐಎಂಎ ಆಗ್ರಹಿಸಿದೆ.

ಈ ಸಂಬಂಧ ಪುತ್ತೂರು ಭಾರತೀಯ ವೈದ್ಯಕೀಯ ಸಂಘ(ಐಎಂಎ) ಮತ್ತು ವೈದ್ಯರ ವೇದಿಕೆ ವೃತ್ತಿ ಬಾಂಧವರು ಕೆಲಸ ಕಾರ್ಯ ಸ್ಥಗಿತಗೊಳಿಸಿ, ಪ್ರತಿಭಟಿಸುತ್ತಿರುವುದಕ್ಕೆ ಕುಂದಾಪುರ ಶಾಖೆಯು ಬೆಂಬಲ ವ್ಯಕ್ತ ಪಡಿಸಿದ್ದು, ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಬಳಿಕ ಕುಂದಾಪುರ ಶಾಖೆ ತಹಶೀಲ್ದಾರರ ಮೂಲಕ ಮನವಿಯನ್ನು ಆರೋಗ್ಯ ಸಚಿವ ಯು.ಟಿ.ಖಾದರ್ ಅವರಿಗೆ ಸಲ್ಲಿಸಿತು. ಕುಂದಾಪುರ ಐಎಂಎ ಶಾಖೆಯ ಅಧ್ಯಕ್ಷರಾದ ಡಾ.ಮೋಹನ ಕಾಮತ್, ಕಾರ್ಯದರ್ಶಿ ಡಾ.ರಂಜಿತ್ ಹೆಗ್ಡೆ, ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

DSC_7415

Exit mobile version