ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕಶ್ವಿ ಚೆಸ್ ಸ್ಕೂಲ್‌ನಲ್ಲಿ ಶನಿವಾರ ಸಾಧಕರಿಗೆ ಉತ್ತಮ ಸಾಧಕ ಪ್ರಶಸ್ತಿ ನೀಡಲಾಯಿತು.
ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಮನನ್ ಶೆಟ್ಟಿ (ಗೋಲ್ಡನ್ ಗ್ರೂಪ್), ಬ್ರಹ್ಮಾವರ ಲಿಟಲ್ ರಾಕ್ ಇಂಡಿಯನ್ ಆಂಗ್ಲ ಮಾಧ್ಯಮ ಶಾಲೆಯ ಸನಾ ಶೆಟ್ಟಿ (ಡೈಮಂಡ್ ಗ್ರೂಪ್), ಅವರುಗಳ ಪರಿಶ್ರಮವನ್ನು ಮತ್ತು ಚೆಸ್ ಆಟವನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.