Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಮಹಿಳಾ ಕಾಂಗ್ರೆಸ್‌ನಿಂದ ವಿಶ್ವ ಮಹಿಳಾ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಮಹಿಳಾ ಕಾಂಗ್ರೆಸ್ ಪಕ್ಷದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ಇಲ್ಲಿನ ರೋಟರಿ ಭವನದಲ್ಲಿ ನಡೆಯಿತು.

ತಾಲೂಕು ಪಂಚಾಯತ್ ಸದಸ್ಯೆ ಪ್ರಮಿಳಾ ದೇವಾಡಿಗ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ವೈದ್ಯರು ಹಾಗೂ ಪ್ರೇರಣಾ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಸುಬ್ರಹ್ಮಣ್ಯ ಭಟ್ ಮಾತನಾಡಿ, ಮಹಿಳೆಯರ ಆರೋಗ್ಯ, ಪ್ರಸ್ತುತ ಸಮಾಜದಲ್ಲಿ ಮಹಿಳೆಯರ ಬದುಕು, ದೇಶಕ್ಕೆ ಮಹಿಳೆಯರ ಕೊಡುಗೆ ಮತ್ತು ಮಹಿಳೆಯರ ಕರ್ತವ್ಯ ಸ್ಥಾನಮಾನದ ಕುರಿತು ಹೇಳಿದರು.

ಕಾರ್ಯಕ್ರಮದಲ್ಲಿ ಹಿರಿಯ ಮಹಿಳೆ ಗೀತಾ ಇವರ ಪಾದಪೂಜೆ ನಡೆಯಿತು. ಸ್ಯಾಕ್ಸೋಫೋನ್ ವಾದನದಲ್ಲಿ ವಿಶೇಷ ಸಾಧನೆಯನ್ನು ಮಾಡಿದ ವೀಣಾ ದೇವಾಡಿಗ ಉಪ್ಪುಂದ ಇವರನ್ನು ಸನ್ಮಾನಿಸಲಾಯಿತು.

ಇತ್ತೀಚೆಗೆ ನಡೆದ ಗ್ರಾಮ್ ಪಂಚಾಯತ್ ಚುನಾವಣೆ ಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಮಹಿಳೆಯರನ್ನು
ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಗೌರಿ ದೇವಾಡಿಗ, ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೂರ್ಯಕಾಂತಿ ಪಡುವರಿ, ಕಾರ್ಯದರ್ಶಿ ಶಾಂತಿ, ಹಾಗೂ ಅನೇಕ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Exit mobile version