ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿಜ್ಞಾನ ವೇದಿಕೆ ಆಶ್ರಯದಲ್ಲಿ ‘ರಾಷ್ಟ್ರೀಯ ವಿಜ್ಞಾನ ದಿನ – ತರಂಗ 2k21’ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಣಿಪಾಲ ರೋಟರಿ, ಇಂಟರ್‌ನ್ಯಾಷನಲ್ ಡಿಸ್ಟ್ರಿಕ್ಟ್3182 RC ಅಸಿಸ್‌ಟೆಂಟ್ ಗವರ್ನರ್ ಡಾ. ಬಾಲಕೃಷ್ಣ ಮದ್ದೋಡಿ, ರಾಷ್ಟ್ರೀಯ ವಿಜ್ಞಾನ ದಿನದ ಮಹತ್ವವನ್ನು ವಿವರಿಸಿದರು, ಜೊತೆಗೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ದಶರಥರಾಜ್ ಕೆ. ಶೆಟ್ಟಿ, ಅಸೋಸಿಯೇಟ್ ಪ್ರೊಫೆಸರ್, ಎಂ.ಐ.ಟಿ., ಮಣಿಪಾಲ ಇವರು ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ, ಸಿ.ವಿ. ರಾಮನ್ ಕುರಿತು ಹಲವಾರು ವಿಚಾರಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿ, ರಾಷ್ಟ್ರೀಯ ವಿಜ್ಞಾನ ದಿನದ ಆಚರಣೆಗೆ ಶುಭಹಾರೈಸಿ, ಅನ್ವೇಷಣೆ ಬಗ್ಗೆ ವಿವರಿಸಿದರು. ಉಪಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ಕಾರ್ಯಕ್ರಮದ ಸಂಯೋಜಕರಾದ ವನಿತಾ ಜಿ., ಉಪಸ್ಥಿತರಿದ್ದರು.
ಭೌತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಚೈತ್ರಾ ಸ್ವಾಗತಿಸಿ, ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ನಿರೂಷಾ ಶೆಟ್ಟಿ ವಂದಿಸಿ, ಗಣಕ ವಿಜ್ಞಾನ ವಿಭಾಗದ ಉಪನ್ಯಾಕಿ ವಿನಿತಾ ಎಸ್. ಗಾಣಿಗ ನಿರೂಪಿಸಿದರು.

