Site icon Kundapra.com ಕುಂದಾಪ್ರ ಡಾಟ್ ಕಾಂ

ದೇವಸ್ಥಾನದ ಬಾವಿಯಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕೋಟತಟ್ಟು ಪಡುಕೆರೆಯ ಶಿರಸಿ ಮಾರಿಕಾಂಬಾ ದೇವಸ್ಥಾನದ ಬಾವಿಗೆ ವ್ಯಕ್ತಿ ಒಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಕೋಟತಟ್ಟು ಪಡುಕೆರೆಯ ಚೆನ್ನಿ ಪೂಜಾರಿ(50) ಎಂದು ಗುರುತಿಸಲಾಗಿದೆ.

ಇವರು ಮಣೂರು ಪಡುಕೆರೆಯಲ್ಲಿ ಬೀಡಾ ಅಂಗಡಿ ನಡೆಸುತ್ತಿದ್ದು ಮದುವೆಯಾಗಿ ಎರಡು ಮಕ್ಕಳಿದ್ದು ಹತ್ತು ವರ್ಷ ಹಿಂದೆ ವಿಚ್ಚೆದನ ಪಡೆದಿದ್ದು ಇದರಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು.

ದೇವಸ್ಥಾನದ ಬಾವಿಯ ಹಗ್ಗವನ್ನು ಉಪಯೋಗಿಸಿ ಬಾವಿಯೊಳಗೆ ಚೆನ್ನಿ ಪೂಜಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಬೆಳಿಗ್ಗೆ 5.30 ಗಂಟೆಗೆ ದೇವಸ್ಥಾನದ ಭಟ್ಟರು ಪೂಜೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿಯಬೇಕಾಗಿದೆ. ಕೋಟ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Exit mobile version