ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ನಡೆಯುತ್ತಿರುವ ಜಲಜೀವನ್ ಮಿಷನ್ ಯೋಜನೆಯನ್ನು ಸಕಾಲದಲ್ಲಿ ಮುಕ್ತಾಯಗೊಳಿಸಿ, ಸಾರ್ವಜನಿಕರಿಗೆ ಯೋಜನೆಯ ಸಂಪೂರ್ಣ ಪ್ರಯೋಜನ ಒದಗಿಸುವಂತೆ ರಾಜ್ಯ ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರದಾನ ಕಾರ್ಯದರ್ಶಿ ಎಲ್. ಕೆ. ಅತೀಕ್ ಹೇಳಿದರು.
ಅವರು ಶನಿವಾರ, ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಗ್ರಾಮೀಣಾಭಿವೃಧ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಮನೆಗಳಿಗೆ ಶುದ್ದ ಕುಡಿಯುವ ನೀರು ಕುಡಿಯುವ ಉದ್ದೇಶವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ನಿಗಧಿತ ಅವಧಿಯೊಳಗೆ ನೀರು ಒಗಿಸುವಂತೆ ಸೂಚಿಸಿದ ಪ್ರದಾನ ಕಾರ್ಯದರ್ಶಿಗಳು, ಯೋಜನೆಯ ಅನುಷ್ಠಾನದಲ್ಲಿ ಯಾವುದೇ ದೂರುಗಳಿಗೆ ಆಸ್ಪದವಾಗದಂತೆ, ಸ್ಥಳೀಯ ಜನಪ್ರನಿಧಿಗಳ ಅಭಿಪ್ರಾಯಗಳನ್ನು ಆಲಿಸಿ , ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ಸಾರ್ವಜನಿಕರಿಗೆ ಶುದ್ದ ಕುಡಿಯುವ ನೀರು ಒದಗಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಕುರಿತು ಪರಿಶೀಲಿಸಿದ ಪ್ರದಾನ ಕಾರ್ಯದರ್ಶಿ ಎಲ್. ಕೆ. ಅತೀಕ್ , ಮಾರ್ಚ್ ಅಂತ್ಯ ಸಮೀಪಿಸುತ್ತಿದ್ದು , ಎಲ್ಲಾ ಇಲಾಖೆಗಳು ತಮಗೆ ನಿಗಧಿಪಡಿಸಿರುವ ಗುರಿಯನ್ನು ಸಂಪೂರ್ಣವಾಗಿ ಸಾಧಿಸುವಂತೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.