Kundapra.com ಕುಂದಾಪ್ರ ಡಾಟ್ ಕಾಂ

ಸರಸ್ವತಿ ವಿದ್ಯಾಲಯದಲ್ಲಿ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟ ಉದ್ಘಾಟನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ವಿದ್ಯಾರ್ಥಿಗಳು ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಸೋಲು-ಗೆಲುವನ್ನು ಸಮಚಿತ್ತದಿಂದ ಸ್ವೀಕರಿಸಬೇಕು. ಕ್ರೀಡಾ ಶಿಕ್ಷಣದ ಜೊತೆ ಜೊತೆಯಲ್ಲಿ ವ್ಯಕ್ತಿತ್ವ ವಿಕಸನದ ಕಡೆಗೂ ಗಮನಹರಿಸಬೇಕು ಎಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕರಾದ ಸುಕೇಶ್ ಶೆಟ್ಟಿ ಹೇಳಿದರು.

ಅವರು ಗಂಗೊಳ್ಳಿಯ ಸರಸ್ವತಿ ವಿದ್ಯಾಲಯದಲ್ಲಿ, ಪದವಿಪೂರ್ವ ಕಾಲೇಜು ಶಿಕ್ಷಣ ಇಲಾಖೆ ಉಡುಪಿ, ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜು ಗಂಗೊಳ್ಳಿ ಮತ್ತು ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಬಾಲ್ ಬ್ಯಾಡ್ಮಿಂಟನ್ ಮತ್ತು ಟೆನ್ನಿಕಾಯ್ಟ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಶ್ರೀ ಗುರು ಜ್ಯೋತಿ ಸ್ಪೋರ್ಟ್ಸ್ ಕ್ಲಬ್ ಗಂಗೊಳ್ಳಿಯ ಅಧ್ಯಕ್ಷರಾದ ಸುಧಾಕರ್ ಖಾರ್ವಿದೀಪ ಪಂದ್ಯಾಟದ ಉದ್ಘಾಟನೆಯನ್ನು ನೆರವೇರಿಸಿದರು. ಜಿ ಎಸ್ ವಿ ಎಸ್ ಅಸೋಸಿಯೇಷನ್ನಿನ ಕಾರ್ಯದರ್ಶಿ ಎಚ್ ಗಣೇಶ್ ಕಾಮತ್ ಶುಭಾಶಂಸನೆಗೈದರು.

ಕಾಲೇಜಿನ ಪ್ರಾಂಶುಪಾಲೆ ಕವಿತಾ ಎಮ್ ಸಿ ಅಧ್ಯಕ್ಷತೆ ವಹಿಸಿದ್ದರು. ಸರಸ್ವತಿ ವಿದ್ಯಾಲಯ ಸಂಸ್ಥೆಗಳ ಕಾರ್ಯದರ್ಶಿ ಎನ್ ಸದಾಶಿವ ನಾಯಕ್ ಉಪಸ್ಥಿತರಿದ್ದರು.

ಹಿಂದಿ ಉಪನ್ಯಾಸಕ ನಾರಾಯಣ ನಾಯ್ಕ್ ಅತಿಥಿಗಳನ್ನು ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಸುಜಯೀಂದ್ರ ಹಂದೆ ಕಾರ್ಯಕ್ರಮವನ್ನು ನಿರ್ವಹಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕರಾದ ನಾಗರಾಜ ಶೆಟ್ಟಿ ವಂದಿಸಿದರು.

Exit mobile version