Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ವಿದ್ಯೋದಯ ಪದವಿಪೂರ್ವ ಕಾಲೇಜು, ಉಡುಪಿ ಇವರ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸುಬ್ರಮಣ್ಯ ಶಾಸ್ತ್ರಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು, ಉಡುಪಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯ 70 ಕೆಜಿ ವಿಭಾಗದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಪೂರ್ಣೇಶ್ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

ಸಾಧನೆಗೈದ ಕಾಲೇಜಿನ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕವೃಂದ ಅಭಿನಂದಿಸಿದ್ದಾರೆ.

Exit mobile version