Kundapra.com ಕುಂದಾಪ್ರ ಡಾಟ್ ಕಾಂ

ಮೂಡ್ಲಕಟ್ಟೆ ಎಂಐಟಿ: ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೂಡ್ಲಕಟ್ಟೆ ಕಾಲೇಜಿನಲ್ಲಿ ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಆಶ್ರಯದಲ್ಲಿ ಪ್ರಥಮ ವರ್ಷದ ಎಂ.ಬಿ.ಎ ಹಾಗು ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಸ್ವಯಂ ರಕ್ಷಣೆ ಪ್ರಾತ್ಯಕ್ಷಿಕೆ ಕಾರ್ಯಾಗಾರ ನಡೆಸಲಾಯಿತು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ. ಚಂದ್ರರಾವ್ ಮದಾನೆ, ವಿದ್ಯಾರ್ಥಿಗಳು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ವಿವಿಧ ಸಾಹಸ ಕಲೆಗಳನ್ನು ಕಲಿಯಬೇಕು. ಆ ನಿಟ್ಟಿನಲ್ಲಿ ಜಾಗೃತರಾಗಲು ಇಂತಹ ಕಾರ್ಯಾಗಾರವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಕರಾಟೆ ಅಸೋಸಿಯೇಷನ್ ಕರ್ನಾಟಕ ಇದರ ಕಾರ್ಯದರ್ಶಿ, ಫಿನಿಕ್ಸ್ ಅಕಾಡೆಮಿ ಇಂಡಿಯ ಇದರ ಅಧ್ಯಕ್ಷರು, ಹಾಗು 5 ಡಾನ್ ಬ್ಲಾಕ್ ಬೆಲ್ಟ್ , ವರ್ಲ್ಡ್ ಕರಾಟೆ ಫೆಡರೇಶನ್ ತರಬೇತುದಾರ ಕೀರ್ತಿ ಜಿ.ಕೆ ಅವರು, ಅನಿರೀಕ್ಷಿತವಾಗಿ ನಡೆಯುವ ಘಟನೆ ಸಂದರ್ಭದಲ್ಲಿ ಹೇಗೆ ಪಾರಾಗಬೇಕು, ತಮ್ಮನ್ನು ತಾವು ಹೇಗೆ ರಕ್ಷಣೆ ಮಾಡಿಕೊಳ್ಳುವುದು ಎನ್ನುವ ಕುರಿತು ಸ್ವಯಂ ರಕ್ಷಣೆ ಕೌಶಲ ಪ್ರಾತ್ಯಕ್ಷಿಕೆ ನೀಡಿದರು.

ಇದೇ ಸಂದರ್ಭದಲ್ಲಿ ಕಾಲೇಜಿನ ಸಿಬ್ಬಂದಿ, ಕರಾಟೆ ಇಂಡಿಯ ಸಂಸ್ಥೆಯ ಸರ್ಟಿಫೈಡ್ ಕೋಚ್.ಅಕ್ಷಯ್ ಪೂಜಾರಿ ಇವರಿಗೆ 3ಡಾನ್ ಬ್ಲಾಕ್ ಬೆಲ್ಟ್ ಶಿಟಾರಿಯೋವನ್ನು ವಿತರಿಸಲಾಯಿತು.

ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿ ಸೋಜಾ, ಕಾಲೇಜಿನ ಡೀನ್, ವಿಭಾಗದ ಮುಖ್ಯಸ್ಥರು, ಸಿಬಂದಿ ವರ್ಗ ಹಾಗು ಪ್ರಥಮ ವರ್ಷದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಮುಗ್ದ ಸ್ವಾಗತಿಸಿ, ಪ್ರತೀಕ್ಷಾ ವಂದಿಸಿದರು.

Exit mobile version