Kundapra.com ಕುಂದಾಪ್ರ ಡಾಟ್ ಕಾಂ

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಶಂಕರ್ ಪೂಜಾರಿ ಕಾಡಿನತಾರು ಆಯ್ಕೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಂಗಳೂರು ವಿದ್ಯಾನಗರದಲ್ಲಿ ಮಾ.13, 14ರಂದು ನಡೆದ 2ನೇ ರಾಜ್ಯ ಮಟ್ಟದ ಮಾಸ್ಟರ್ಸ್ಸ್ಪೋಟ್ಸ್ 2021 ಕ್ರೀಡಾಕೂಟದಲ್ಲಿ ಉಡುಪಿ ಜಿಲ್ಲಾ ಪೋಲಿಸ್ ಇಲಾಖೆಯ ಸಿಬ್ಬಂದಿ ಬಿಜೂರು ಶಂಕರ ಪೂಜಾರಿ ಕಾಡಿನತಾರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಶಂಕರ ಪೂಜಾರಿ ಅವರು 40ರಿಂದ 45 ವರ್ಷದೊಳಗಿನ ವಯೋಮಿತಿಯಲ್ಲಿ ನಡೆದ 100ಮೀಟರ್ ಹಾಗೂ 200 ಮೀಟರ್ ಓಟದ ಸ್ಪರ್ಧೆಯಲ್ಲಿ 2 ಬೆಳ್ಳಿ ಪದಕ ಪಡೆದುಕೊಂಡು ಹೈದರಬಾದ್‌ನಲ್ಲಿ ನಡೆಯುವ ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಮೂಲತಃ ಬಿಜೂರಿನವರಾದ ಶಂಕರ ಪೂಜಾರಿ ಅವರು ಪ್ರಸ್ತುತ ಯಡ್ತಾಡಿ ಸೈಬ್ರಕಟ್ಟೆಯಲ್ಲಿ ವಾಸಿಸುತ್ತಿದ್ದಾರೆ. ಉಡುಪಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಬೆಂಗಾವಲು ವಾಹನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಂಕರ ಪೂಜಾರಿ ಅವರನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.

Exit mobile version