Site icon Kundapra.com ಕುಂದಾಪ್ರ ಡಾಟ್ ಕಾಂ

ಜೆಇಇ ಮೈನ್ಸ್, ಬಿ – ಆರ್ಕಿಟೆಕ್ಚರ್ ಪರೀಕ್ಷೆಯಲ್ಲಿ ವೈಷ್ಣವಿ ಟಿ. ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ದೇಶದ ಎನ್‌ಐಟಿ ಗಳಲ್ಲಿನ ಆರ್ಕಿಟೆಕ್ಚರ್ ಕೋರ್ಸ್‌ನ ಪ್ರವೇಶಕ್ಕಾಗಿ ನಡೆದ ಜೆಇಇ ಮೈನ್‌ನ ಬಿ – ಆರ್ಕಿಟೆಕ್ಚರ್ ಪರೀಕ್ಷೆಯಲ್ಲಿ ಕುಂದಾಪುರದ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ವೈಷ್ಣವಿ ಟಿ. ದೇವಾಡಿಗ 96.5 ಅಂಕ ಪಡೆಯುವುದರ ಮೂಲಕ ಸಾಧನೆ ಮೆರೆದಿದ್ದಾರೆ. ಹಾಗೆಯೇ ಆರ್ಕಿಟೆಕ್ಚರ್ ಡ್ರಾಯಿಂಗ್‌ನಲ್ಲಿ 99.7 ಅಂಕ ಪಡೆದಿದ್ದಾರೆ.

ಸಾಧನೆಗೈದ ವಿದ್ಯಾರ್ಥಿನಿಯನ್ನು ಶ್ರೀ ವೆಂಕಟರಮಣ ದೇವ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಕಾರ್ಯದರ್ಶಿಗಳಾದ ಕೆ. ರಾಧಾಕೃಷ್ಣ ಶೆಣೈ, ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು ಅಭಿನಂದಿಸಿದ್ದಾರೆ.

Exit mobile version